ಜನನವಿಲ್ಲದ ಜನಿತನು ನೀನು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಜನನವಿಲ್ಲದ ಜನಿತನು ನೀನು ನೋಡಯ್ಯಾ
ಜನಿಯಿಸಿ ಸಂಸಾರವನರಿಯದ ನಿರ್ವಿಕಾರಿ ನೀನು ನೋಡಯ್ಯಾ
ಭವಬಂಧನಗಳಿಲ್ಲದ ನಿತ್ಯನಿಜತತ್ವವು ನೀನು ನೋಡಯ್ಯಾ
ನಿನ್ನ ಚರಣಸೇವೆಯ ಮಾಡಿ
ಎನ್ನ ಭವ ಹರಿಯಲೆಂದಿಪ್ಪೆನಲ್ಲದೆ
ನಿಮ್ಮ ಘನವೆಂತೆಂದು ಅರಿಯೆ ನೋಡಯ್ಯಾ. ಕೂಡಲಸಂಗಮದೇವಾ
ನೀನು ಕೊಂಡಾಡಲಾನು ಪ್ರಾಪ್ತನೆ ಹೇಳಾ ಪ್ರಭುವೆ.