ಜನಿತಕ್ಕೆ ತಾಯಾಗಿ ಹೆತ್ತಳು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ
ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ
ಕೂಟಕ್ಕೆ ಸ್ತ್ರೀಯಾಗಿ ಕೂಡಿದಳು ಮಾಯೆ
ಇದಾವಾವ ಪರಿಯಲ್ಲಿ ಕಾಡಿಹಿತು ಮಾಯೆ. ಈ ಮಾಯೆಯ ಕಳೆವಡೆ ಎನ್ನಳವಲ್ಲ
ನೀವೆ ಬಲ್ಲಿರಿ ಕೂಡಲಸಂಗಮದೇವಾ ! 15