Library-logo-blue-outline.png
View-refresh.svg
Transclusion_Status_Detection_Tool

ಜಲದೊಳಗೆ ಹುಟ್ಟಿ ನೆಲದೊಳಗೆ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಜಲದೊಳಗೆ ಹುಟ್ಟಿ ನೆಲದೊಳಗೆ ಹುದುಗಿರ್ದುದ
ಕೆಲಬಲದೊಳಗಿರ್ದವರೆಲ್ಲಾ ಬಲ್ಲರೆ ? ಗಾಳಿಯೊಳಗಿಪ್ಪ ಜ್ಯೋತಿ ಕೆಡದೆ ಇದ್ದುದ ಕಂಡು _ನಾನು ಬೆರಗಾದೆ ! ಬಾಲಕ್ರೀಡೆಯೊಳಗಾಡುತ್ತಿಪ್ಪ ನಾರಿಯ ಮಕ್ಕಳೈವರು
ಆರೂ ಕಾಣದ ಬಾವಿಯೊಳಗೆ ಬಿದ್ದಿರಲು
ಬೇರೆ ಮತ್ತೆ ಜ್ಞಾನವೆಲ್ಲಿಯದೊ ? ಗುಹೇಶ್ವರಾ
ನಿಮ್ಮನರಿಯದ
ಬರಿಯರಿವಿನ ಹಿರಿಯರ ಕಂಡಡೆ
ನಾನು ನಾಚುವೆನಯ್ಯಾ.