ವಿಷಯಕ್ಕೆ ಹೋಗು

ಜಲದ ಮಂಟಪದ ಮೇಲೆ

ವಿಕಿಸೋರ್ಸ್ದಿಂದ


Title vachana saahitya
Author Akka Mahaadevi
Year 1130-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ಜಲದ ಮಂಟಪದ ಮೇಲೆ ಉರಿಯ ಚಪ್ಪರವನಿಕ್ಕಿ
ಆಲಿಕಲ್ಲ ಹಸೆಯ ಹಾಸಿ ಬಾಸಿಗವ ಕಟ್ಟಿ
ಕಾಲಿಲ್ಲದ ಹೆಂಡತಿಗೆ ತಲೆಯಿಲ್ಲದ ಗಂಡ ಬಂದು ಮದುವೆಯಾದನು. ಎಂದೆಂದೂ ಬಿಡದ ಬಾಳುವೆಗೆ ಕೊಟ್ಟರೆನ್ನ. ಚೆನ್ನಮಲ್ಲಿಕಾರ್ಜುನನೆಂಬ ಗಂಡಂಗೆನ್ನ ಮದುವೆಯ ಮಾಡಿದರೆಲೆ ಅವ್ವಾ.