ವಿಷಯಕ್ಕೆ ಹೋಗು

ಜಲವೆ ಅಂಗವಾದ ಮಾಹೇಶ್ವರನಲ್ಲಿ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya


ಜಲವೆ ಅಂಗವಾದ ಮಾಹೇಶ್ವರನಲ್ಲಿ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯ ಭಕ್ತನಪ್ಪ ಅಂಗಪಂಚಕವು ಗರ್ಭೀಕೃತವಾಗಿ ಆ ಮಾಹೇಶ್ವರಂಗೆ ಗುರುಲಿಂಗ ಸಂಬಂಧವಾಗಿ ಆ ಗುರುಲಿಂಗದಲ್ಲಿಯೆ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗ ಆಚಾರಲಿಂಗವೆನಿಸುವ ಲಿಂಗಪಂಚಕವು ಗರ್ಭೀಕೃತವಾಗಿ ಗುರುಲಿಂಗವೆ ಆಶ್ರಯವಾಗಿ ಇಂತೀ ಷಡ್ವಿಧಲಿಂಗದಲ್ಲಿಯೆ ಬೆರಸಿ ಬೇರಿಲ್ಲದರಿಬಲ್ಲರೆ ಮಾಹೇಶ್ವರನೆಂಬೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.