ವಿಷಯಕ್ಕೆ ಹೋಗು

ಜಾಗರ/ಯಕ್ಷಗಾನ - ಸಾಹಿತ್ಯ ಮಾಧ್ಯಮ

ವಿಕಿಸೋರ್ಸ್ದಿಂದ
ಯಕ್ಷಗಾನ - ಸಾಹಿತ್ಯ ಮಾಧ್ಯಮ (1984)
99520ಯಕ್ಷಗಾನ - ಸಾಹಿತ್ಯ ಮಾಧ್ಯಮ1984




ಯಕ್ಷಗಾನ ಸಾಹಿತ್ಯ ಮಾಧ್ಯಮ
ಯಕ್ಷಗಾನ ಒಂದು ಸಿದ್ಧರಂಗಭೂಮಿ. ನಾಲ್ಕಾರು ಶತಮಾನಗಳ ಕಾಲ ಅದು ಬೆಳೆದು, ಕೆಲವು ಖಚಿತವಾದ ರೂಪರೇಷೆಗಳನ್ನೂ ಚೌಕಟ್ಟನ್ನೂ ಪಡೆದಿದೆ. ಹೀಗೆ ಯಕ್ಷಗಾನದ ಚಿತ್ರ, ಸಂಗೀತ, ಪ್ರಸಂಗ ರಚನೆ, ರಂಗತಂತ್ರ ಅಭಿವ್ಯಕ್ತಿಯ ವಿಧಾನ ಇವಕ್ಕೆ ಒಂದು ಸ್ವತಂತ್ರ ಭಾಷೆ' ಮತ್ತು ಆ ಭಾಷೆಗೆ ಒಂದು 'ವ್ಯಾಕರಣ' ಏರ್ಪಟ್ಟಿದೆ. ಗಾನ, ಹಿಮ್ಮೇಳ, ವೇಷ - ಇವುಗಳಲ್ಲಿ ಅಂತಹ ನಿಯಮ ಹೆಚ್ಚು ಬಿಗು ವಾದದ್ದು - ಏಕೆಂದರೆ ಈ ಮೂರು ಅಂಗಗಳು ಹೆಚ್ಚು ಶೈಲೀಕೃತ ( Stylised ) ಆಗಿ ನಿಂತಿದೆ, ಯಕ್ಷಗಾನದ ಯಕ್ಷಗಾನತ್ವ ಇರುವುದು ಇದರ ಸ್ವತಂತ್ರವಾದ, ಶ್ರೀಮಂತವಾದ, ಸಂಗೀತ, ವೇಷ, ನೃತ್ಯಗಳ ಶೈಲಿಯಲ್ಲಿ. ಯಕ್ಷಗಾನದ ಯಾವುದೇ ಅಂಗದಲ್ಲಿ, ಅಥವಾ ಒಟ್ಟಾಗಿ ಯಾವುದೇ ಪರಿಷ್ಕಾರಗಳನ್ನು, ಸೃಷ್ಟಿಶೀಲ ಪ್ರಯೋ ಗಗಳನ್ನು ಮಾಡುವವನಿಗೆ ಸಿದ್ಧರಂಗಭೂಮಿಯ ಪ್ರಜ್ಞೆಯೂ, ಅದರ ಅಂಗೋ ಪಾಂಗಗಳ ಸ್ವರೂಪದ ಜ್ಞಾನವೂ, ಅವುಗಳಲ್ಲಿ ವಿಸ್ತರಣದ ಸಾಧ್ಯತೆಯ ಬಗೆಗೆ ನೋಟವೂ ಇರಬೇಕಾಗುತ್ತದೆ.
ಕಲಾ ದೃಷ್ಟಿಯಿಂದಲೂ, ಒಟ್ಟು ಪರಿಣಾಮದ ದೃಷ್ಟಿಯಿಂದಲೂ ಯಕ್ಷ ಗಾನದ ಎಲ್ಲ ಅಂಗಗಳೂ ಸಮಾನ ಪ್ರಾಧಾನ್ಯವುಳ್ಳವು ನಿಜ, ಆದರೆ, ಸಂವಹನದ ದೃಷ್ಟಿಯಿಂದ, ಓರ್ವ ಪ್ರೇಕ್ಷಕನ ದೃಷ್ಟಿಯಿಂದ ಮಾತುಗಾರಿಕೆಗೆ ಮುಖ್ಯ ಸ್ಥಾನ ಆಟ, ಅದರ ಕತೆ, ವಸ್ತು, ಬೆಳವಣಿಗೆ ಇವು ಪ್ರೇಕ್ಷಕನಿಗೆ ಮುಟ್ಟುವುದು ಮಾತಿನ ಮೂಲಕವೇ ( ಈ ಮಾತನ್ನು ಒಂದು ಮಟ್ಟದಲ್ಲಿ ಗ್ರಹಿಸಬೇಕು. ) ಗೀತ, ಮಾತು ಇವುಗಳಿಂದಲೇ ಕೇಳುಗರನ್ನು ಮುಟ್ಟುವ ತಾಳ ಮದ್ದಳೆಯನ್ನು ಪರಿಭಾವಿಸಿದರೆ ಈ ಮಾತು ಸ್ಪಷ್ಟವಾಗುತ್ತದೆ. - [ ಹಾಗೇ ಮಾತಿಲ್ಲದೆ ಯಕ್ಷಗಾನದ ನೃತ್ಯ ನಾಟಕವೂ ಬೇರೆ ಒಂದು ಮಟ್ಟದಲ್ಲಿ ಸಫಲವಾಗುತ್ತದೆ. ] - ಯಕ್ಷಗಾನದ ಪ್ರಚಲಿತವಿರುವ, ಯಕ್ಷಗಾನದ್ದೇ • ಆದ ಪ್ರೇಕ್ಷಕರು ಇರುವಲ್ಲಿ ಯಕ್ಷಗಾನದ ಸಂವಹನದ ಯಶಸ್ಸು ಪ್ರಧಾನವಾಗಿ ಮಾತುಗಾರಿಕೆಯನ್ನೇ ಅವಲಂಬಿಸುತ್ತದೆ. ಭಾಷೆ ಎಂಬುದು ಹೆಚ್ಚು

ಸರಳವಾದ, ಎಲ್ಲರನ್ನೂ ಮುಟ್ಟುವ ಮಾಧ್ಯಮವಾಗಿರುವುದು ಇದಕ್ಕೆ ಕಾರಣ,
ಯಕ್ಷಗಾನ - ಸಾಹಿತ್ಯ ಮಾಧ್ಯಮ / ೬೧

ಯಕ್ಷಗಾನದ ಮಾತುಗಾರಿಕೆಯಲ್ಲಿ ಇರುವ ಆಶುಭಾಷಣ ಪದ್ಧತಿ, ಕಲಾ ವಿದನಿಗೆ ಅಸೀಮವಾದ ಸೃಷ್ಟಿ ಸ್ವಾತಂತ್ರ್ಯವನ್ನು ಕೊಡುತ್ತದೆ. ಮತ್ತು ಅಂತಹ ಒಂದು ಸ್ವಾತಂತ್ರ್ಯವನ್ನು ಬಳಸಿಕೊಂಡು, ಯಕ್ಷಗಾನ ಅರ್ಥ' - ಎಂಬ ಮಾತು ಗಾರಿಕೆಯ ಪ್ರಕಾರ ಸಾಧಿಸಿರುವ ಬೆಳವಣಿಗೆ, ನಯ - ನಾಜೂಕುತನ ಪ್ರಪಂಚದ ಕಲಾರಂಗಕ್ಕೇ ಅದ್ಭುತವೆನಿಸುವ ವೈಶಿಷ್ಟ್ಯಗಳು. ಮಾತುಗಾರನಿಗಿರುವ ಅಸಾಧಾರಣ ಸ್ವಾತಂತ್ರ್ಯವೇ, ಆಮಾಧ್ಯಮಗಾರನ ಮೇಲೆ ದೊಡ್ಡ ಜವಾಬ್ದಾರಿಯನ್ನು ಹೊರಿಸಿ, ಕಲಾಸೃಷ್ಟಿಯಲ್ಲಿ ಎಚ್ಚರ ಹಾಗೂ ಸಂಯಮಗಳನ್ನು ಬಯಸುತ್ತದೆ. 'ಹಲಗೆ ಬಳ ಪವ ಪಿಡಿಯದ' 'ಪದವಿಟ್ಟಳು ಪದ' ವಾಗರ್ಥಸಿದ್ಧಿ ಸುಲಭದ ಮಾತಲ್ಲ.
ಒಂದು ಕಾಲಕ್ಕೆ ಅರ್ಥಗಾರಿಕೆಯೆಂಬುದು ಬಹುಪಕ್ಷ, ಪ್ರಸಂಗದ ಸರಳಾ ನುವಾದವಾಗಿ ಮಾತ್ರ ಬರುತ್ತಿತ್ತು. ಸಂವಾದವೆಂಬುದು ಮುಂದಿನ ಪದ್ಯದ ಎತ್ತು ಗಡೆಗೆ ಸಾಧನ ಮಾತ್ರ. ಪದ್ಯಗಳ ಅರ್ಥ, ಪೀಠಿಕೆ, ಸ್ವಗತ, ಎತ್ತುಗಡೆಯ ಪ್ರಶ್ನೆ ಗಳು - ಇವೆಲ್ಲ ಸಿದ್ದ ಕಲ್ಪನೆಗಳ ಜಾಡನ್ನೇ ಹಿಡಿದು ಸಾಗುತ್ತಿದ್ದವು. ಆದರೆ ಪೌರಾ ಣಿಕ ಸಾಹಿತ್ಯ, ಶಾಸ್ತ್ರ ಮತ್ತು ಸಮಕಾಲೀನ ಸಾಹಿತ್ಯಗಳನ್ನು ಅಭ್ಯಸಿಸಿದ ವಾಗ್ಮಿ ಗಳು ಸ್ವತಂತ್ರ ಆಶುನಾಟಕದ ಅನರ್ಥ್ಯ ಸಾಧ್ಯತೆಗಳನ್ನು ಕಂಡು, ಇದರಲ್ಲಿ ಹಲವು ಬಗೆಯ ಪ್ರಯೋಗಗಳನ್ನು ಮಾಡಿದರು. ಇಂದು ನಮಗೆ ಕೇಳಸಿಗುವ ಯಕ್ಷಗಾನದ ಅರ್ಥಗಾರಿಕೆ ಸುಮಾರು ಐವತ್ತು ವರ್ಷಗಳ ಕೃಷಿಕಾರ್ಯದ ಸ್ವರೂಪದ್ದು.
ಇಂತಹ ಪ್ರಯೋಗ ಕಾರ, ಖಂಡನ, ಮಂಡನ, ವಾಗ್ವಾದಗಳಿಗೆ ದಾರಿ ಮಾಡಿತು. ನವೀನ ಕಲ್ಪನೆಗಳಿಗೆ ನೂತನ ವ್ಯಾಖ್ಯಾನಗಳಿಗೆ, ಪಾಂಡಿತ್ಯಪೂರ್ಣ ಕಸರತ್ತುಗಳಿಗೆ ಮಾತುಗಾರಿಕೆ ಒಂದು ರಂಗವಾಯಿತು. ಆದರೆ ಇವೇ ಇನ್ನೊಂದು 'ಅತಿಗೆ' ಮುಟ್ಟಿ ಅತಿ ದೀರ್ಘ ಭಾಷಣ, ಒಣ ಚರ್ಚೆ, ಅತಿ ವಾದ ಬೆಳೆದು, ನಾಟ ಕೀಯ ಸ್ವಾರಸ್ಯಕ್ಕೆ ಯಕ್ಷಗಾನ-ವಿಶೇಷತಃ ತಾಳಮದ್ದಳೆ - ಎರವಾದ ಸಂದರ್ಭಗಳೂ ಒದಗಿ ಬಂದುವು. ಈ ಮಾತುಗಾರಿಕೆ ರಸಿಕ ಪ್ರೇಕ್ಷಕರಿಂದ ದೂರವಾಗಿ, ಬರಿಯ ಶುಷ್ಕ ಕದನ ಎನ್ನುವಂತಾದುದೂ ಉಂಟು. ಇದಕ್ಕೆ ಪ್ರತಿಕ್ರಿಯೆಯೋ ಎಂಬಂತೆ, ಮಾತುಗಾರಿಕೆ ಹೊಸ ಸಮತೋಲವನ್ನು ಪಡೆಯುತ್ತಿರುವುದನ್ನು ಕಾಣಬಹುದು. ಉದ್ದುದ್ದ ಪೀಠಿಕೆಗಳ ಅನಾವಶ್ಯಕ ವಾದಗಳ ಕಾಲ ಕಳೆದು ಹೋಗಿದೆ ಎಂಬುದು, ಇಂದಿನ ಆಟ ಕೂಟಗಳ ಅರ್ಥಗಾರಿಕೆಯನ್ನು ಅಭ್ಯಸಿಸಿದಲ್ಲಿ ಸ್ಪಷ್ಟವಾಗುವುದು. ಯಕ್ಷಗಾನ ಮಾತುಗಾರಿಕೆಯನ್ನು ಹೊಸತಾಗಿ ಕೇಳಿದವರ, ಅದು ರಂಗದಲ್ಲಿ ಆ ಹೊತ್ತಿಗೆ ನಿರ್ಮಾಣವಾಗುವ ಸಾಹಿತ್ಯವೆಂದರೆ ನಂಬುವುದೇ ಇಲ್ಲ. ಅಲ್ಲಿ ಭಾಷೆ, ಭಾವ, ಕಲ್ಪನೆ, ಜಾಣೆ ಇವು ಅಂತಹ ಬೆಳವಣಿಗೆ ಸಾಧಿಸಿವೆ.
ಯಕ್ಷಗಾನ ಸಾಹಿತ್ಯದ ಎರಡೂ ಅಂಗಗಳು - ಪ್ರಸಂಗ ಸಾಹಿತ್ಯ ಮತ್ತು ಅರ್ಥಗಾರಿಕೆ - ಇಂದು ಪ್ರೌಢ ಶಿಷ್ಟ ಸಾಹಿತ್ಯದ ಲಕ್ಷಣಗಳನ್ನು ಹೊಂದಿ, ಉತ್ತಮ ೨ | ಜಾಗರ
ಕಾವ್ಯ ನಾಟಕಗಳಿಗೆ ಸರಿದೊರೆಯಾಗಿದೆ.ಆದರೆ ಪ್ರಸಂಗಕರ್ತನಾಗಲಿ, ಅರ್ಥ ಗಾರನಾಗಲಿ 'ಸಾಹಿತಿ” ಎಂಬ ಗಣನೆಗೆ ಪಾತ್ರನಾಗಿಲ್ಲ. ಯಕ್ಷಗಾನವು ಒಟ್ಟು ಶಿಷ್ಟ ಅದು ಬೆಳೆದು ಸಾಹಿತ್ಯ ಪ್ರಪಂಚದಿಂದ ಬೇರೆಯಾಗಿ ಇದ್ದುದು ಮತ್ತು ಬಂದ ಐತಿಹಾಸಿಕ, ಸಾಮಾಜಿಕ ಸನ್ನಿವೇಶ ಈ ಕಾರಣಗಳಿಂದ ಹೀಗಾಗಿದೆ. ಆದುದರಿಂದಲೇ ಪ್ರಸಂಗಗಳ ಮತ್ತು ಮಾತುಗಾರಿಕೆಯ ಸಾಹಿತ್ಯಕ ಅಭ್ಯಾಸ ವಾಗಲಿ, ವಿಮರ್ಶೆಯಾಗಲಿ ತಕ್ಕಷ್ಟು ನಡೆದಿಲ್ಲ. ಈ ಬಗೆಗೆ ಸಮರ್ಥ ವಿಮರ್ಶಕರು ಆಸಕ್ತಿ ಹರಿಸಿ ಶ್ರಮವಹಿಸಿದಾಗ ಯಕ್ಷಗಾನದ ಶ್ರೇಷ್ಠ ಅರ್ಥಧಾರಿ, ಕನ್ನಡದ ಉತ್ಕೃಷ್ಟ ಕವಿಗಳ, ಸೃಷ್ಟಿಶೀಲ ಬರಹಗಾರರ ಮಟ್ಟದ ಮಾನ್ಯತೆ ಗಳಿಸಬಲ್ಲ, ಗಳಿಸು ವಂತಾಗಬೇಕು. ಶ್ರೇಷ್ಠ ಮಟ್ಟದ ವಿಶ್ಲೇಷಕ ಮನಸ್ಸುಗಳು ಈ ರಂಗದತ್ತ ಪ್ರವೃತ್ತವಾಗಿವೆ.
ತೀರ ಸರಳವಾಗಿ ತೋರುವ ಶಬ್ದಗಳ ಆಧಾರದಿಂದ ಎಂತಹ ಅದ್ಭುತ ವಾದ ನಾಟಕಗಳನ್ನು ಕಟ್ಟಲು, ಧ್ವನಿಯನ್ನು ಹೊರಡಿಸಲು ಸಾಧ್ಯ ಎಂಬುದನ್ನು ಅರ್ಥಧಾರಿಗಳು ತೋರಿಸಿ ಕೊಟ್ಟಿದ್ದಾರೆ. ಪೌರಾಣಿಕ ಘಟನೆಗಳಿಗೆ ಅರ್ಥ ಹಚ್ಚುತ್ತ, ಅವನ್ನು ಇಂದಿನ ಕೇಳುಗನಿಗೆ ಪ್ರಸ್ತುತವಾಗಿಸುತ್ತ ಎಲ್ಲಿಂದೆಲ್ಲಿಗೆ ಸಂಬಂಧ ತೋರಿಸಿ, ಘಟನೆಗಳ ಸಮನ್ವಯ ಮಾಡುತ್ತ ಅನುಭವ ಪ್ರಪಂಚವನ್ನು ತೆರೆದಿದ್ದಾರೆ. ಆಧುನಿಕ ಮನಸ್ಸಿನ ಸಂಶಯ, ವಿಮರ್ಶೆಗಳನ್ನು ಕಲೆಯ ತತ್ವಕ್ಕೆ ಚ್ಯುತಿಬಾರದ ಹಾಗೆ, ಮಂಡಿಸಲು ಸಾಧ್ಯ ಎಂಬುದನ್ನು ಚಿತ್ರಿಸಿ ತೋರಿದ್ದಾರೆ. ಒಂದೇ ಪ್ರಸಂಗದ ಒಂದೊಂದು ಪ್ರದರ್ಶನವು ವಿಭಿನ್ನ ವಿನ್ಯಾಸ ಸೌಂದರ್ಯಗಳುಳ್ಳ ಕಲಾಕೃತಿಗಳಾಗಿ ಅರಳುವ ಪವಾಡ, ಈ ಮಾಧ್ಯಮದ ವೈಶಿಷ್ಟ್ಯ ಈ ರಂಗದ 'ಮಹಾವಾಗ್ಮಿ' [ಮಹಾಕವಿ ಎಂಬ ಹಾಗೆ ಶೇಣಿ ಸಾವಿರಾರು ಸಲ ಹೇಳಿದ ಕೌರವ, ವಾಲಿ, ಭೀಷ್ಮನಂತಹ ಪಾತ್ರಗಳಲ್ಲಿ ಇಂದೂ ಹಿಂದೆ ಹೇಳದ ಹೊಸ ಹೊಸ ವಿಷಯವನ್ನು ಹೇಳಿ ಆ ಪಾತ್ರದ ವ್ಯಕ್ತಿಯಲ್ಲಿ ಪ್ರತಿಭೆ ಇದ್ದರೆ, ಆಳ, ಅಗಲಗಳಿಗೆ ಮಿತಿ ಇಲ್ಲವೆಂಬುದನ್ನೂ ಕಾಣಿಸಿದುದನ್ನು ಕೇಳಿ ಈ ಮಾಧ್ಯಮದ ಬಗೆಗೆ ನಾವು ಹೆಮ್ಮೆ ಪಡುವಂತಾಗಿದೆ. ಪುರಾಣ, ಶಾಸ್ತ್ರ ಪ್ರಸಂಗ ಸಾಹಿತ್ಯಗಳ ಜತೆ ಜೀವ ನಾನುಭವವನ್ನು ಯಕ್ಷಗಾನದ ಮಾತುಗಾರಿಕೆ ಒಳಗೊಳ್ಳುವ ಬಗೆ, ಇದು ಬರಿಯ ಪುರಾಣ ಚಿತ್ರಣದ ಮ್ಯೂಸಿಯಂ ಕಲೆಯಾಗಲಿ, ಸವೆದು ಹೋದ ಮಾಧ್ಯಮ ವಾಗಲಿ ಅಲ್ಲ ಎಂಬುದನ್ನು ತೋರಿಸುತ್ತಾರೆ. ಶೇಣಿ, ಸಾಮಗ, ದೇರಾಜೆ, ತೆಕ್ಕಟ್ಟೆ ಆನಂದ ಮಾಸ್ತರ್, ಪೆರ್ಲರಂತಹ ಮಾತುಗಾರರೂ, ಯಕ್ಷಗಾನದ ಹಾಸ್ಯಗಾರರೂ, ಬೇರೆ ಬೇರೆ ಮಟ್ಟಗಳಲ್ಲಿ ಜೀವನದ ಅನುಭವವನ್ನು ಈ ಕಲೆಯಲ್ಲಿ ಎಷ್ಟು ಸುಂದರ ವಾಗಿ ತರಬಹುದು ಎಂಬುದನ್ನು ತೋರಿದ್ದಾರೆ.
ಲಿಖಿತ ಸಾಹಿತ್ಯಕ್ಕಿಲ್ಲದ ಸೌಲಭ್ಯಗಳು ಈ ಮಾಧ್ಯಮಕ್ಕಿವೆ. ಜೀವಂತ

ಕಂಠಧ್ವನಿ ನಿರ್ಮಿಸುವ ನಾದಪ್ರಪಂಚ, ಸಾಹಿತ್ಯಕ ಗುಣವನ್ನು ಮೀರಿ, ಭಾವವನ್ನು
ಯಕ್ಷಗಾನ - ಸಾಹಿತ್ಯ ಮಾಧ್ಯಮ ೬೩

ಸಂವಹಿಸುತ್ತದೆ; ಅರ್ಥಗಾರಿಕೆಯಲ್ಲಿ.
ಯಕ್ಷಗಾನ ಪ್ರಸಂಗ ಸಾಹಿತ್ಯ ಇಡಿಯ ಪ್ರದರ್ಶನದ ಆಧಾರ, ಹಾಗಾಗಿ ಯಕ್ಷಗಾನದ ವಸ್ತು, ಆಶಯ ಮತ್ತು ಚಿತ್ರಣದ ವೈವಿಧ್ಯ ಮತ್ತು ಕಲೆಗಾರಿಕೆ - ಇವುಗಳ ಗರಿಷ್ಠ ಸಾಧ್ಯತೆಯ ಮೂಲ ಪ್ರಸಂಗ ರಚನೆಯೇ, ಪ್ರಸಂಗದ ಸಾಹಿತ್ಯದ ಹರಹು ದೊಡ್ಡದು. ಪೌರಾಣಿಕ, ಜಾನಪದ, ಕಾಲ್ಪನಿಕ, ಕ್ಷೇತ್ರ ಪುರಾಣ ಹೀಗೆ ಹಲವು ಮೂಲದ ವಸ್ತುಗಳು ಇಲ್ಲಿ ಪ್ರಯೋಗಗೊಂಡಿವೆ.
ಪ್ರಸಂಗ ಸಾಹಿತ್ಯವನ್ನು ಅವಲೋಕಿಸುವಾಗ ಮುಖ್ಯವಾಗಿ ಗಮನಿಸ ಬೇಕಾದ ಅಂಶವೆಂದರೆ, ಅದು ರಂಗಸಾಹಿತ್ಯವೆಂಬುದು. ಪ್ರಸಂಗದ ಪದ್ಯಗಳು, ಗಾನಕ್ಕೆ, ಲಯಕ್ಕೆ, ನೃತ್ಯಕ್ಕೆ ಒದಗುವ ಗೇಯ ರಚನೆಗಳಾಗಬೇಕು. ಶುದ್ದ ಕಾವ್ಯ ವನ್ನು ರಚಿಸುವ ಕವಿಗೆ ಇರುವ ಸ್ವಾತಂತ್ರ್ಯ ಯಕ್ಷಗಾನ ಕವಿಗೆ ಇಲ್ಲ. ರಚನೆ ಸರಳ ವಾಗಿ, ಅರ್ಥಹೇಳುವುದಕ್ಕೆ ಅವಕಾಶವನ್ನೂ ನೆಲೆಯನ್ನೂ ಒದಗಿಸುವಂತೆಯೂ ಇರ ಬೇಕಾಗುತ್ತದೆ. ಮಾತುಗಾರಿಕೆಯ ರೀತಿ ಗತಿಗಳ ಮೇಲೆ ವೇಷ, ನೃತ್ಯ, ಹಿಮ್ಮೇಳ ಗಳ ಆವರಣ ಹೊರಿಸುವ ಮಿತಿ ಇದ್ದಂತೆ, ಪ್ರಸಂಗ ರಚನೆ ಯ ಮೇಲೂ, ಈ ಮಾಧ್ಯಮದ ಒಟ್ಟು ಸ್ವರೂಪ ನಿರ್ಬಂಧ ಹೇರುತ್ತದೆ.
ಈ ಮಿತಿಯನ್ನು ಉಳಿಸಿ ಯಕ್ಷಗಾನ ಮಾಧ್ಯಮಕ್ಕೆ ಸಂಗತವಾಗಿ, ಕಥೆಯ ವಿನ್ಯಾಸದಲ್ಲಿ, ಆಶಯದಲ್ಲಿ ಹೊಸ ಆವಿಷ್ಕಾರಗಳನ್ನು ತಂದು ನವಿನ ಸಂಘರ್ಷ ವಿನ್ಯಾಸಗಳನ್ನು ಮಂಡಿಸುವ ಪ್ರಯತ್ನಗಳು ನಡೆದಿವೆ. ಅಮೃತ ಸೋಮೇಶ್ವರ, ಗುಂಡೂ ಸೀತಾರಾಮ್ ರಾವ್, ರಾಘವ ನಂಬಿಯಾರ್ ಮುಂತಾದ ಕವಿಗಳ ಪ್ರಸಂಗ ರಚನೆ ಇಂತಹ ಯತ್ನಗಳನ್ನು ತೋರುತ್ತದೆ. 'ಹೊಸ ಪ್ರಸಂಗ' ಎಂದೊಡನೆ ಮಗು ಮುರಿಯುವ ಪ್ರವೃತ್ತಿ ಕೆಲವು ಸಲ ಕಂಡು ಬರುತ್ತಿದೆ. ಆದರೆ ಸ್ಥಿತಿ ಹಾಗಲ್ಲ. ಹಾಗೆ ನೋಡಿದರೆ, ಇಂದಿನ ಸಾಧಾರಣ ದರ್ಜೆಯ ಯಕ್ಷಗಾನ ಕವಿ ಕೂಡಾ. ರಂಗದೃಷ್ಟಿಯನ್ನು ಅಳವಡಿಸಿ ಪ್ರಸಂಗ ರಚನೆ ಮಾಡುವುದನ್ನು ನಾವು ನೋಡು ತ್ತೇವೆ.



ತಾಯಿನುಡಿ' - ದೀಪಾವಳಿ ಸಂಚಿಕೆ ೧೯೮೨,