ಜಾಗರ/ಹವ್ಯಾಸೀ ಯಕ್ಷಗಾನ ಸಂಘಗಳು
ಹವ್ಯಾಸೀ -ಯಕಗಾನ ಸಂಘಗಳು
ಹವ್ಯಾಸೀ ಕಲಾಸಕ್ತರ ಒಂದೇ ಬಲವಾದ ಗುಂಪು ಇರುವಲ್ಲಿ ಯಾವುದೇ
ಕಲೆಯಿರಲಿ, ಅದರ ಅಭಿವೃದ್ಧಿಗೆ ಒಳ್ಳೆಯ ಗತಿ ಬಂದಿದೆ ಎನ್ನಬಹುದು. ರಂಗದ
ಪ್ರಗತಿ, ಅದರ ಬಹುಮುಖ ಅಭಿವೃದ್ಧಿ, ಮುಖ್ಯವಾಗಿ ಕಲಾವ್ಯವಸಾಯವನ್ನೇ
ಅವಲಂಬಿಸಿದೆ, ನಿಜ. ಆದರೆ ಹವ್ಯಾಸೀ ಸಂಸ್ಥೆಗಳು ರಂಗದ ಪ್ರಗತಿಗೆ ಹೊಸದಾರಿ
ನೀಡಬಲ್ಲವು, ಕಲೆಯಲ್ಲಿ ಹೊಸ ರಕ್ತ ತುಂಬಬಲ್ಲವು, ವ್ಯವಸಾಯೀ ಸಂಸ್ಥೆಗಳಲ್ಲಿ
ಮನೆ ಮಾಡಿಕೊಂಡಿರುವ ದೋಷಗಳನ್ನು ದೂರಮಾಡಬಲ್ಲವು. ಇಂದು ಯಕ್ಷಗಾನ-
ರಂಗಭೂಮಿಯ ಸ್ಥಿತಿಯನ್ನು ನೋಡಿದರೆ, ಹವ್ಯಾಸಿಗಳು ಮಾಡಬಹುದಾದದ್ದು
ಸಾಕಷ್ಟು ಇದೆಯೆಂದು ಅನಿಸುತ್ತದೆ. ಆದರೆ ನಿಜವಾದ ಅರ್ಥದಲ್ಲಿ "ಅಮೆಚೂರ್
ರಂಗಭೂಮಿ” ಯಕ್ಷಗಾನದಲ್ಲಿ ಇನ್ನೂ ಕಾಣಿಸಿಕೊಂಡಿಲ್ಲ.
ಹವ್ಯಾಸೀ ಯಕ್ಷಗಾನ ಸಂಘಗಳು ಮಾಡಬಹುದಾದ ಕೆಲಸಗಳನ್ನು ಈ
ರೀತಿಯಲ್ಲಿ ಸಂಗ್ರಹಿಸಬಹುದಾಗಿದೆ.
1 ನಿಯತಕಾಲಿಕವಾಗಿ “ತಾಳ ಮದ್ದಳೆಗಳನ್ನು ಏರ್ಪಡಿಸುವುದು, ಇದರಿಂದ
ಅರ್ಥಗಾರಿಕೆ, ಭಾಗವತಿಗೆ ಹಾಗೂ ವಾದ್ಯವಾದನಗಳಿಗೆ ಯೋಗ್ಯ ತರಬೇತು ಸಿಗು
ವುದು. ಇಂದಿನ ಕಲಾವಿದರಲ್ಲಿ ಒಂದು ಮುಖ್ಯ ಭಾಗವೆಂದರೆ ಇಂತಹ ಹವ್ಯಾಸೀ
ಸಂಘಗಳಿಂದ ಬಂದದ್ದು, ಸಂಗೀತ, ನಾಟಕಗಳಲ್ಲಿ ಕೆಲಸ ಮಾಡುವ ಹವ್ಯಾಸಿಗಳಿಗೆ
ಇಂತಹ ನಿಯಮಿತ ಅಭ್ಯಾಸಕೂಟ ಸೌಲಭ್ಯವಿಲ್ಲ.
2 ವರ್ಷಕ್ಕೆ ಒಂದೆರಡಾವರ್ತಿ ಕಲಾ ಪರಿಣತರಿಂದ 'ತಾಳಮದ್ದಳೆ ಹಾಗೂ
ಬಯಲಾಟಗಳನ್ನು ಏರ್ಪಡಿಸುವುದು. ಇದರಿಂದ ಪರಿಸರದ ಜನರಿಗೆ ಒಳ್ಳೆಯ
ಕಾರ್ಯಕ್ರಮಗಳನ್ನು ನೋಡುವ ಅವಕಾಶ ದೊರೆಯುವುದು.–
3 ಕೆಲವು ಸಂಸ್ಥೆಗಳು ಪ್ರತಿ ಮಳೆಗಾಲದಲ್ಲಿ ನೃತ್ಯ, ಚೆಂಡೆ, ಮದ್ದಳೆಗಳಲ್ಲಿ ಅಭ್ಯಾಸ
ವರ್ಗಗಳನ್ನು ನಡೆಸುತ್ತವೆ. ೫೬ / ಜಾಗರ
ಹವ್ಯಾಸೀ ಸಂಘಗಳು ಕಲಾವಿದರ ತರಬೇತಿ, ಮತ್ತು ಪ್ರೇಕ್ಷಕರ ತಯಾರಿ
ಈ ಎರಡು ಕೆಲಸಗಳಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಆಗಾಗ ಹವ್ಯಾಸೀ ತಾಳ-
ಮದ್ದಳೆಗಳು ಜರಗುವ ಸ್ಥಳಗಳಲ್ಲಿ. ಆಟ, ತಾಳಮದ್ದಳೆಗಳನ್ನು ಅನುಭವಿಸಿ
ನೋಡುವ, ಅದರ ಕುಂದುಕೊರತೆಗಳನ್ನು ಗುರುತಿಸಬಲ್ಲ ಪ್ರೇಕ್ಷಕರನ್ನು ನಾವು
ಕಾಣುತ್ತೇವೆ.
ಹವ್ಯಾಸೀ - ಸಂಘಗಳು ಉತ್ತಮ ಪ್ರದರ್ಶನದ ಮೂಲಕ, ಯಕ್ಷಗಾನವು
ಅಪರಿಚಿತವಾಗಿರುವಲ್ಲಿ, ಅದರ ಬಗೆಗೆ ಆಸಕ್ತಿ ಮೂಡಿಸುವ ಕೆಲಸಗಳನ್ನು ಮಾಡಿವೆ
ಮಂಗಳೂರಿನ ಶ್ರೀ ಬಾಲಕೃಷ್ಣ ರಾಯರ ಶರವು ಯಕ್ಷಗಾನ ಸಂಘ” ಮತ್ತು
ಕರ್ಕಿಯ ಹಾಸ್ಯಗಾರ ಮನೆತನದ “ಯಕ್ಷಗಾನ ಮಂಡಳಿ” ಈ ದಿಸೆಯಲ್ಲಿ ಉಲ್ಲೇಖ
ನೀಯ ಕಾರ್ಯ ಮಾಡಿವೆ.
ಮನೋವಿಕಾಸ - ಸಾಧನಗಳು ಕಡಿಮೆ ಇರುವ ಹಳ್ಳಿಗಳಲ್ಲಿ ಜನರ ಮನ
ಸ್ಸನ್ನು ಅರಳಿಸುವ ಹಾಗೂ ಮನೋರಂಜನೆಯನ್ನು ಒದಗಿಸುವ ಕೆಲಸವನ್ನು
“ಹವ್ಯಾಸೀ ಸಂಘಗಳು ನಡೆಸುತ್ತ ಬಂದಿವೆ. ಇವು ನಮ್ಮ ಪುರಾಣಗಳನ್ನೂ ಸಂಸ್ಕೃ
ತಿಯ ವಿವಿಧ ಮುಖಗಳನ್ನೂ ಜನರಿಗೆ ಪರಿಚಯ ಮಾಡಿಸಿವೆ.
ಆದರೆ ಹವ್ಯಾಸೀ - ಸಂಘಗಳಲ್ಲಿ ಕಲಾ- ಕಾರ್ಯಕ್ರಮಗಳ ಸುವ್ಯವಸ್ಥೆಗೆ
ಹಾಗೂ ಸಂಘಗಳ ಸಾರ್ಥಕ ವ್ಯವಸಾಯಕ್ಕೆ ಬಾಧಕವಾಗುವ ಅಂಶಗಳನ್ನು ಇಲ್ಲಿ
ಹೇಳಬೇಕಾಗಿದೆ.
1 ಬಹುಮಂದಿ “ಹವ್ಯಾಸೀ - ಕಲಾವಿದರಲ್ಲಿ ರಂಗ ವ್ಯವಹಾರಕ್ಕೆ ಹಾಗೂ ಸಾರ್ವ
ಜನಿಕ ಪ್ರದರ್ಶನಕ್ಕೆ ಬರುವ ಮೊದಲು ಸಾಕಷ್ಟು ಶ್ರದ್ದೆ ಯಿಂದ ಕೂಡಿದ ಪರಿಶ್ರಮ
ಇದ್ದಂತೆ ಕಾಣುವುದಿಲ್ಲ. ಹೇಗಾದರೂ, ಬೇಗ ರಂಗಸ್ಥಳಕ್ಕೆ ಬರಬೇಕೆಂಬ
ಹಂಬಲವೇ ಪ್ರಬಲವಾಗಿರುವಂತೆ ಕಾಣುತ್ತದೆ. ನಾಟ್ಯವೊಂದನ್ನು ಮಾತ್ರ ಕುರಿತು
ಯಕ್ಷಗಾನದ ಇತರ ಮುಖ್ಯಾಂಶಗಳ ಕಡೆಗೆ ಗಮನವಿಲ್ಲದಿರುವಂತೆ ತೋರುತ್ತದೆ.
2 ಪ್ರದರ್ಶನದಲ್ಲಿ ಮೌಲಿಕ ದೃಷ್ಟಿಯಿಂದ ಕೆಲಸ ಮಾಡುವ ದೃಷ್ಟಿ, ವೈಚಾರಿಕ
ಸಾಮರ್ಥ್ಯ ಕಂಡುಬರುವುದಿಲ್ಲ. ಉದಾಹರಣೆಗಾಗಿ ಹೇಳುವುದಾದರೆ, ಸಾಕ ಷ್ಟು
ತಯಾರಿಯಿಂದ, ಅಪರೂಪಕ್ಕೆ ಪ್ರದರ್ಶನ ಏರ್ಪಡಿಸುವ ಈ ತಂಡಗಳು 'ಬಯ
ಲಾಟ'ಕ್ಕೂ 'ತಾಳಮದ್ದಳೆ'ಗೂ ಸೂಕ್ತ ದಿಗ್ದರ್ಶನ ಹಾಗೂ ಪೂರ್ವಸಂಯೋಜನೆಯ
ವ್ಯವಸ್ಥೆ ಮಾಡುವ ಬಗ್ಗೆ ಯೋಚಿಸಿದಂತೆ ಕಾಣುವುದಿಲ್ಲ, ರಂಗ ಭೂ ಮಿ ಮತ್ತು
ಗಳಿಗೆ ಸುವ್ಯವಸ್ಥಿತ ರೂಪ ಕೊಡುವ ಕುರಿತು ಪ್ರಯತ್ನ ಮಾಡುವ ಅವಕಾಶ ಈ
ಸಂಸ್ಥೆಗಳಿಗೆ ಇದೆ.
3 ಹವ್ಯಾಸೀ ಸಂಸ್ಥೆಗಳ ಹೆಚ್ಚಿನ ಪ್ರದರ್ಶನಗಳು ಪ್ರಸಿದ್ಧ ವ್ಯವಸಾಯೀ ಕಲಾ
ವಿದರ ಸಪ್ಪೆ ಹಾಗೂ ದುರ್ಬಲ ಅನುಕರಣೆಗಳಿಂದ ಕೂಡಿರುತ್ತವೆ. ವ್ಯವಸಾಯಿ
ಗಳಿಂದ ನಾವು ಯಾವುದನ್ನು ಅನುಕರಿಸಬೇಕು, ಯಾವುದರ ಅನುಕರಣೆ ಸಲ್ಲದು
ಎಂಬುದರ ಕುರಿತಾದ ಯೋಗ್ಯ ಆಯ್ಕೆ ಇದ್ದಂತೆ ಕಾಣಿಸುವುದಿಲ್ಲ. ಇದರ ಪರಿಣಾಮ
ವಾಗಿ, ಪ್ರಸಿದ್ದ ಕಲಾವಿದರಲ್ಲಿ ಯಾವ ಅಂಶಗಳು ವರ್ಜವೋ, ಅಂದರೆ ಯಾವುವು
ದೋಷಗಳೋ, ಅವೇ ಹವ್ಯಾಸಿಗಳ ಆದರ್ಶಗಳಾಗುತ್ತವೆ.
ತೀರಾ ಕಳಪೆ ಅನಿಸುವ “ಬಾಕ್ಸ್ ಆಫೀಸ್” ಹಾಸ್ಯ, ಪ್ರಸಿದ್ಧ ಕಲಾವಿದರು
ಹಾರಿಸುವ ರಂಗಬಾಹ್ಯ ಚಟಾಕಿಗಳು, ರಾಜಕೀಯ ಶಬ್ದಾವಳಿಗಳು - ಇವನ್ನು
ಬಹಳ ಶ್ರದ್ದೆಯಿಂದ ಹವ್ಯಾಸಿಗಳು ಅನುಕರಿಸುತ್ತಾರೆ; ಜನಪ್ರಿಯ ಸಿನೆಮಾಗಳನ್ನು
ನಾಟಕ ತಂಡಗಳು ಅನುಕರಿಸುವ ಹಾಗೆ ಇದೆ ಈ ಸ್ಥಿತಿ. ಹವ್ಯಾಸಿಗಳು ಮಾಡ
ಬೇಕಾದುದು ಇದನ್ನಲ್ಲ, ನಿಜವಾಗಿಯೂ ಇದು ಮಾಡಬಾರದ್ದು, ಹಾಗಾಗಿ ಮೇಳ
ಗಳ ದೊಡ್ಡ ತಾಳ-ಮದ್ದಳೆಗಳ - ಅನುಕರಣೆಯಿಂದ ಬದುಕಲು ಯತ್ನಿಸುವುದೇ
ಹವ್ಯಾಸಿಯ ಯಶಸ್ಸಿನ ದಾರಿ.
4 ಯಕ್ಷಗಾನ ಸಂಘಗಳಲ್ಲಿರುವ ಸ್ಥಾಪಿತ ಹಿತಾಸಕ್ತಿಗಳು, ಇನ್ನೊಂದು ದೊಡ್ಡ
ಸಮಸ್ಯೆ. ಇದರಿಂದಾಗಿ ಸಂಘಗಳು ಅಭ್ಯಾಸಕೂಟಗಳಾಗುವ ಬದಲು ಕೆಲವ್ಯಕ್ತಿಗಳ
ಸ್ವಪ್ರದರ್ಶನದ ವೇದಿಕೆಗಳಾಗುತ್ತವೆ. ಸಂಘದಲ್ಲಿ ಹಲವು ಅರ್ಥದಾರಿಗಳಿದ್ದಾರೆಂದು
ಕೊಳ್ಳಿ. ಅಭ್ಯಾಸದ ದೃಷ್ಟಿಯಿಂದ ಸಂಘದ ಕೂಟಗಳಲ್ಲಿ ಒಬ್ಬೊಬ್ಬರಿಗೆ ಒಮ್ಮೊಮ್ಮೆ
ಮಹತ್ವದ ಪಾತ್ರ ಕೊಡಬೇಕಾದುದು ಧರ್ಮ, 'ಕೃಷ್ಣ ಸಂಧಾನ' ದಲ್ಲಿ ಒಬ್ಬನು
ಒಮ್ಮೆ ಸಹದೇವನ ಪಾತ್ರವಹಿಸಿದರೆ, ಇನ್ನೊಮ್ಮೆ ಭೀಮ, ದೌಪದಿಯೇ ಮುಂತಾದ
ಬೇರೆ ಪಾತ್ರವಹಿಸುವ ಅವಕಾಶವೂ ಸಿಗಬೇಕು. ಪರ್ಯಾಯ ಕ್ರಮದಿಂದ “ಕರ್ಣಾ
ರ್ಜುನದ ಸರ್ಪಾಸ್ತ್ರದಿಂದ ಕರ್ಣನವರೆಗಿನ ಪಾತ್ರಗಳು ಅಭ್ಯಾಸಿಗೆ ಸಿಗಬೇಕು. ಆದರೆ
ಹಲವೆಡೆ ಹಾಗಾಗುವುದಿಲ್ಲ. 'ರಾವಣವಧೆ'ಯ ರಾಮ, ರಾವಣ, 'ವಾಲಿ-ವಧೆ'ಯ
ವಾಲಿ, ರಾಮ, ಕೃಷ್ಣ ಸಂಧಾನ'ದ ಕೃಷ್ಣ, ಕೌರವ ಇತ್ಯಾದಿ ಪಾತ್ರಗಳು ಒಬ್ಬೊಬ್ಬ
ರಿಗೇ ಮೀಸಲು. ಇದು ಅಭ್ಯಾಸದ ದಾರಿಯಲ್ಲ. ಸಂಘಗಳು, ಅಭ್ಯಾಸಕ್ಕಾಗಿಯೆಂದು
ಹುಟ್ಟಿಕೊಂಡವುಗಳಾದರೂ ಅಭ್ಯಾಸದ ಸರದಿಯ ದಿನ ಪ್ರದರ್ಶನವೆಂದೇ ತಿಳಿಯು
ತಿರುವುದು. ಇದು ಸಂಘಕ್ಕೂ ಅಭ್ಯಾಸಿಗೂ ಅಪಾಯಕಾರಿ.
ಅರ್ಥಗಳನ್ನು monopolize ಮಾಡುವ ಕೆಲವರು ಸಂಘದ ಪ್ರದರ್ಶನ ೫೮| ಜಾಗರ
ಗಳಲ್ಲಿ ಹೊರಗಿನ ಸಮರ್ಥ ಕಲಾವಿದರ ಪ್ರವೇಶಕ್ಕೆ ತಡೆಯೊಡ್ಡುತ್ತಾರೆ. ಈ ರಾಜ
ಕೀಯದಿಂದ ಸಂಘಗಳ ಪ್ರದರ್ಶನಗಳಲ್ಲಿ ಹೊಸತನ ಇಲ್ಲದಂತಾಗಿ, ಪರಿಸರದ ವ್ಯಕ್ತಿ
ಗಳಿಗೆ ಸಂಘದ ಬಗ್ಗೆ ನಿರಾಸೆ, ನಿರಾಸಕ್ತಿ ಮೂಡುವುದು ಸ್ವಾಭಾವಿಕ.
5 ಹವ್ಯಾಸಿಗಳು ತಮ್ಮ ಸಲಕರಣೆಗಳ ಬಗ್ಗೆ ವಹಿಸುವ ಎಚ್ಚರ ಸಾಲದು. ಶ್ರುತಿ
ಕೊಡದ ವಾದ್ಯಗಳು, ಅಚ್ಚು ಕಟ್ಟಿಲ್ಲದ ವೇಷಭೂಷಣಗಳು - ಇವುಗಳಿಂದ ಹಲವು
ಪ್ರದರ್ಶನಗಳು ಉದ್ದೇಶರಹಿತವಾಗಿ, ಕೇವಲ ಹಾಸ್ಯಾಸ್ಪದವಾಗುತ್ತವೆ.
ಈ ಮೇಲಿನ ವಿಚಾರಗಳ ಹಿನ್ನೆಲೆಯನ್ನು ನೋಡಿದರೆ, ಈ ದೋಷಗಳನ್ನು
ದೂರಮಾಡಿ, ತಮ್ಮದೇ ಆದ ದಾರಿಯಲ್ಲಿ ಸಾರ್ಥಕ ಪ್ರದರ್ಶನ ನೀಡಿದ ಎರಡು
ಹವ್ಯಾಸಿ ಸಂಘಗಳ ಹೆಸರುಗಳು ಉಲ್ಲೇಖನೀಯ - 1 ದಿ| ವಿಠಲ ಶಾಸ್ತ್ರಿ- ಶಿಷ್ಯ
ವೃಂದ 2 ಕನ್ಯಾನ ಮತ್ತು ಹಂಗಾರಕಟ್ಟೆಯ ಮೇಳಗಳು.
“ಹವ್ಯಾಸೀ ಸಂಸ್ಥೆ'ಗಳು ಏನು ಮಾಡ ಬಹುದು ಎಂಬುದನ್ನು ಈಗ
ನೋಡೋಣ.
1. ಯಕ್ಷಗಾನದ ಬಗ್ಗೆ ಚರ್ಚೆ - ವಿಮರ್ಶೆ ಮುಂತಾದ ರೀತಿಯಲ್ಲಿ ವಿಚಾರ-
ವಿನಿಮಯ ಬೆಳೆಸಲೋಸುಗ ಚರ್ಚಾಗೋಷ್ಠಿ, ಹಾಗೂ ಸೆಮಿನಾರುಗಳನ್ನು
ಯೋಜಿಸಿ, ಸಾಕಷ್ಟು ಕೆಲಸ ಮಾಡಲು ಅವಕಾಶ ಇದೆ.
2. ಅಶಕ್ತ ಕಲಾವಿದರಿಗಾಗಿ ಒಂದು ಕಲ್ಯಾಣ ನಿಧಿಯು ಸ್ಥಾಪಿತ ವಾಗಬೇಕು.
ನಾಲ್ಕಾರು “ಹವ್ಯಾಸೀ ತಂಡ” ಗಳ ಸಂಯುಕ್ತ ಪರಿಶ್ರಮದಿಂದ ಇದು ಸಾಧ್ಯ.
3, “ಬಯಲಾಟ” ತಾಳಮದ್ದಳೆಗಳಲ್ಲಿ ನವೀನ - ದೃಷ್ಟಿಯ ಪ್ರಯೋಗಗಳನ್ನು
ವ್ಯವಸ್ಥಿತವಾಗಿ ಏರ್ಪಡಿಸುವ, ಹಾಗೂ ಆ ಮೂಲಕ ಜನರ ಅಭಿರುಚಿಯನ್ನು
ತಿದ್ದುವ ಕೆಲಸ ಮಾಡಬಹುದು.
4. ಇಂದಿನ ಅವಶ್ಯಕತೆಗಳಲ್ಲಿ ಪ್ರೇಕ್ಷಕರ ಸಂಘಟನೆಯೂ ಒಂದು. ಪ್ರೇಕ್ಷಕರ
ಸಂಘಟಿತ ಒತ್ತಡದಿಂದ ವ್ಯವಸಾಯಿ ಮೇಳಗಳ ಸಿಕ್ಕಾಬಟ್ಟೆ ಪ್ರದರ್ಶನಗಳ ಮೇಲೆ
ಕಡಿವಾಣ ಹಾಕಿ, ಯಕ್ಷಗಾನ ಸಂಪ್ರದಾಯದ ಅಂದ ಕೆಡದಂತೆ ರಕ್ಷಿಸುವ ಹೊಣೆ
ಹವ್ಯಾಸೀ ಸಂಸ್ಥೆಗಳದ್ದು.
5. ಯಕ್ಷಗಾನದ ಸಾಂಪ್ರದಾಯಿಕ “ವೇಷ ಭೂಷಣ” ತಯಾರಿಸುವ ಕಲೆ ಈಗ
ಕೊಡುವ ಮೂಲಕ ಆ ಕಲೆಯ ಉದ್ಧಾರಕ್ಕೆ ಶ್ರಮಿಸತಕ್ಕದ್ದು.
6. ಬೇರೆ ಬೇರೆ ಹವ್ಯಾಸೀ ಸಂಘಗಳ ಕಲಾವಿದರಿಂದ ಪ್ರದರ್ಶನಗಳ ನ್ನು
ಏರ್ಪಡಿಸಿ ಸಂಘಗಳೊಳಗೆ ಸಹಕಾರ ವರ್ಧನೆ ಹಾಗೂ ಹೊಸ ಕಲಾವಿದರ ಶೋಧನಾ
ಕಾರ್ಯ ನಡೆಯಬೇಕು. ಬಂಟ್ವಾಳದ “ಶ್ರೀ ತಿರುಮಲ ವೆಂಕಟರಮಣ ಸ್ವಾಮಿ
ಯಕ್ಷಗಾನ ಮಂಡಳಿ”ಯು ಈ ನಿಟ್ಟಿನಲ್ಲಿ ಶ್ರಾವಣ ಮಾಸದ ಕೂಟಗಳ ಮೂಲಕ ಈ
ಕಾರ್ಯ ಮಾಡುತ್ತಿರುವುದು ಸ್ತುತ್ಯರ್ಹ.
ಯಕ್ಷಗಾನ ಕಲಾಕ್ಷೇತ್ರ (ರಿ) ಸಿರಿಬೀಡು ಉಡುಪಿ, - ಇವರ ವಿಚಾರಗೋಷ್ಠಿಯಲ್ಲಿ ಮಂಡಿಸಿದ
ಪ್ರಬಂಧ, 21.3.1976 ಉಡುಪಿಯ ರಾಯಭಾರಿ ಯಲ್ಲಿ ಪ್ರಕಟಿತ.