Library-logo-blue-outline.png
View-refresh.svg
Transclusion_Status_Detection_Tool

ಜಾತಕರ್ಮ ಶುಭಕರ್ಮ ಪ್ರೇತಕರ್ಮವ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಜಾತಕರ್ಮ ಶುಭಕರ್ಮ ಪ್ರೇತಕರ್ಮವ ಮಾಡುವರು ಲೋಕದ ಮನುಜರು. ಅದೆಂತೆಂದಡೆ: ಈರಿಲು
ಮೂವಟ್ಟಲು; ಹಸೆ-ಹಂದರ ತೊಂಡಿಲು ಬಾಸಿಂಗ; ಹಣೆಯಕ್ಕಿ ಹೆಣನ ಸಿಂಗಾರ ಶ್ರಾದ್ಧಕೂಳು_ ಈ ಪರಿಯ ಮಾಡುವನೆ ಶಿವಭಕ್ತ [ಅಲ್ಲ] ಅದೆಂತೆಂದಡೆ; ಹುಟ್ಟಿದ ಮಕ್ಕಳಿಗೆ ಲಿಂಗಧಾರಣೆ
ನೆಟ್ಟನೆ ವಿವಾಹದಲ್ಲಿ ಶಿವಗಣಂಗಳ ಪ್ರಸಾದ
ದೇವರಪಾದಕ್ಕೆ ಸಂದಲ್ಲಿ ಶಿವಭಕ್ತಂಗೆ ವಿಭೂತಿವೀಳೆಯಂಗೊಟ್ಟು ಸಮಾಧಿಪೂರ್ಣನಂ ಮಾಡುವುದೆ ಶಿವಾಚಾರ. ಲೋಕದ ಕರ್ಮವ ಮಾಡಿದಡೆ ಆತ ಭಕ್ತನಲ್ಲ
ಲಿಂಗದೂರ ಅಘೋರನರಕಿಯಯ್ಯಾ
ಕೂಡಲಚೆನ್ನಸಂಗಮದೇವಾ