ಜಾಲಗಾರನೊಬ್ಬ ಜಲವ ಹೊಕ್ಕು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಜಾಲಗಾರನೊಬ್ಬ ಜಲವ ಹೊಕ್ಕು ಶೋಧಿಸಿ
ಹಲವು ಪ್ರಾಣಿಯ ಕೊಂದು
ನಲಿನಲಿದಾಡುವ. ತನ್ನ ಮನೆಯಲೊಂದು ಶಿಶು ಸತ್ತಡೆ ಅದಕ್ಕೆ ಮರುಗುವಂತೆ ಅವಕೇಕೆ ಮರುಗ ? ಅದೆಂತೆಂದಡೆ 'ಸ್ವಾತ್ಮಾನಮಿತರಂ ಚೇತಿ ಭಿನ್ನತಾ ನೈವ ದೃಶ್ಯತಾಂ ಸರ್ವಂ ಚಿಜ್ಜ್ಯೋತಿರೇವೇತಿ ಯಃ ಪಶ್ಯತಿ ಸ ಪಶ್ಯತಿ' ಎಂದುದಾಗಿ
ಜಾಲಗಾರನ ದುಃಖ ಜಗಕೆಲ್ಲ ನಗೆಗೆಡೆ. ಇದು ಕಾರಣ
ಚೆನ್ನಮಲ್ಲಿಕಾರ್ಜುನಯ್ಯನ ಭಕ್ತನಾಗಿರ್ದು ಜೀವಹಿಂಸೆ ಮಾಡುವ ಮಾದಿಗರನೇನೆಂಬೆನಯ್ಯಾ ?