ವಿಷಯಕ್ಕೆ ಹೋಗು

ಜೈಮಿನಿ ಭಾರತ

ವಿಕಿಸೋರ್ಸ್ದಿಂದ

ಕಾವ್ಯ ಮತ್ತು ಕವಿಯ ಸಂಕ್ಷಿಪ್ತ ಪರಿಚಯ

[ಸಂಪಾದಿಸಿ]
  • ಲಕ್ಷ್ಮೀಶನು 16ನೆಯ ಶತಮಾನದಲ್ಲಿದ್ದ ಕವಿ ಎಂದು ಭಾವಿಸಲಾಗಿದೆ. ಈತನ ಊರು ಚಿಕ್ಕಮಗಳೂರು ಜಿಲ್ಲೆಯ ದೇವನೂರು. ಅಲ್ಲಿಯ ಲಕ್ಷ್ಮೀಕಾಂತ ದೇವಾಲಯದಲ್ಲಿ ಲಕ್ಷ್ಮೀಶನ ವಿಗ್ರಹವನ್ನು ಸ್ಥಾಪಿಸಲಾಗಿದೆ. ಜೈಮಿನಿ ಭಾರತ ಲಕ್ಷ್ಮೀಶನ ಪ್ರಸಿದ್ಧ ಕಾವ್ಯ. ಇದು ಸಂಸ್ಕೃತ ಜೈಮಿನಿ ಭಾರತದ ಕನ್ನಡ ರೂಪವಾಗಿದ್ದು ವಾರ್ಧಕ ಷಟ್ಪದಿಯಲ್ಲಿದೆ.ಈತನಿಗೆ 'ಕರ್ನಾಟಕ ಕವಿಚೈತ್ರವನ ಚೂತ'ಎಂಬ ಬಿರುದು ಇತ್ತು. ಅವನು ತನ್ನ ವಿಷಯವನ್ನು ಸಂಕ್ಷಿಪ್ತವಾಗಿ ಹೇಳಿದ್ದಾನೆ.
  • ಅವನ ಕಾವ್ಯದಿಂದ ನಮಗೆ ತಿಳಿಯುವುದು, ಅವನು ಭರದ್ವಾಜ ಗೋತ್ರದ ಅಣ್ಣಮಾಂಕನ ಮಗ ಎಂದು ಮಾತ್ರ.
  • ಲಕ್ಷ್ಮೀಶನ ಕಾಲ ಸ್ಪಷ್ಟವಾಗಿ ತಿಳಿದಿಲ್ಲ. ಅವನು ಹದಿನಾಲ್ಕನೇ ಶತಮಾದಿಂದ ಹದಿನೇಳನೇ ಶತಮಾನದ ನಡುವಿನ ಕಾಲದಲ್ಲಿದ್ದ ಬ್ರಾಹ್ಮಣ ಕವಿ. ಹದಿನಾರು - ಹದಿನೇಳನೇ ಶತಮಾನದವನೆಂಬುದಕ್ಕೆ ಹೆಚ್ಚು ಸಂಶೋಧಕರ ಒಲವಿದೆ. ಚಿಕ್ಕಮಗಳೂರು ಜಿಲ್ಲೆ ಅರಸೀಕೆರೆಯ ಹತ್ತಿರದ ದೇವನೂರಿನವನು. ಸ್ಮಾರ್ತ ಬ್ರಾಹ್ಮಣನಾಗಿದ್ದು ಅದ್ವೈತದ ಅನುಯಾಯಿ. ಶ್ರೀರಾಮಾನುಜರ ಮತವಾದ ಶ್ರೀವೈಷ್ಣವನಿರಬಹುದೆಂದೂ ಕೆಲವರು ಊಹಿಸುವರು.
  • ವ್ಯಾಸಭಾರತದಲ್ಲಿ ಅಶ್ವಮೇಧ ಪರ್ವವು ಅಷ್ಟು ವಿಸ್ತಾರವಾಗಿಲ್ಲ. ವ್ಯಾಸಮುನಿಯ ಪ್ರಿಯ ಶಿಷ್ಯನಾದ ಜೈಮಿನಿ ಮುನಿಯು ಅಶ್ವಮೇಧ ಪರ್ವವನ್ನು ವಿಸ್ತಾರವಾದ ಕಥಾ ಸಂವಿಧಾನದೊಡನೆ ಸಂಸ್ಕೃತದಲ್ಲಿ ರಚಿಸಿದ್ದಾನೆ. ಲಕ್ಷ್ಮೀಶನು ಅದನ್ನು ಸೂಕ್ತ ಬದಲಾವಣೆಗಳನ್ನು ಮಾಡಿಕೊಂಡು ಕನ್ನಡಕ್ಕೆ ಸ್ವಂತ ಕಾವ್ಯವೋ ಎನ್ನುವಂತೆ ಅಲಂಕಾರ, ನವರಸಭರಿತವಾಗಿ ರಚಿಸಿರುವುದೇ ಕನ್ನಡ ಜೈಮಿನಿ ಭಾರತ. ಈ ಕಾವ್ಯದಲ್ಲಿ ಭಾಗವತ ದೃಷ್ಟಿಯೇ ಎಂದರೆ ಕೃಷ್ಣನ ಮಹಿಮೆ ಇದರ ವಿಶೇಷವೆನ್ನಬಹುದು. ವ್ಯಾಸ ಭಾರತದ ಮೊದಲ 10 ಪರ್ವಗಳನ್ನು ಕುಮಾರವ್ಯಾಸನು (ಭಾಮಿನಿ ಷಟ್ಪದಿ ಯನ್ನು) ಬಳಸಿದ್ದಾರೆ ಅಲ್ಲದೆ ಕನ್ನಡಕ್ಕೆ ತಂದರೆ ಉಳಿದ ಎಂಟು ಪರ್ವಗಳನ್ನು ತಿಮ್ಮಣ್ಣ ಕವಿಯು ಕನ್ನಡದಲ್ಲಿ ಮೂಡಿಸಿದ್ದಾನೆ. ಲಕ್ಷ್ಮೀಶನು ಮಹಾಭಾರತದ ಅಶ್ವಮೇದ ಪರ್ವವನ್ನು ಮಾತ್ರ ವಿಸ್ತರಿಸಿ ಬರೆದಿದ್ದಾನೆ.
  • ವಿಕಿಪೀಡಿಯಾಕ್ಕೆ:ಜೈಮಿನಿ ಭಾರತ
  • ಜೈಮಿನಿ ಭಾರತದಲ್ಲಿ ಅಲಂಕಾರಗಳು
  • ಜೈಮಿನಿ ಭಾರತದಲ್ಲಿ ನವರಸಗಳು

ಜೈಮಿನಿ ಭಾರತದ ಸಂಧಿಗಳು ಮತ್ತು ಪಠ್ಯ->ಪದ್ಯ: ಪದವಿಭಾಗ: ಅರ್ಥ

[ಸಂಪಾದಿಸಿ]

[]

ಪರಿವಿಡಿ

[ಸಂಪಾದಿಸಿ]

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ


ಉಲ್ಲೇಖ

[ಸಂಪಾದಿಸಿ]
  1. ಉ(.ದಕ್ಷಿಣಾಮೂರ್ತಿ ಶಾಸ್ತ್ರಿ ಮಕ್ಕಳು ಡಿ.ಸುಬ್ಬಾಶಾತ್ರಿಗಳ ಮಕ್ಕಳಾದ ರಂಗಶೇಷಶಾಸ್ತ್ರಿ ; ದಕ್ಷಿಣಾಮೂರ್ತಿ ಶಾಸ್ತ್ರಿ ; ಇವರಿಂದ ರಚಿತವಾದ ನಡುಗನ್ನಡದಲ್ಲಿರುವ ಸುಮಾರು ೧೯೨೦ರಲ್ಲಿ ಅಚ್ಚಾದ ಜೈಮಿನಿಭಾರತ- ಸಟೀಕಾ ಇದರ ಆಧಾರ. -ಕಳಪೆ ಕಾಗದದ ಪುಸ್ತಕ ಜೀರ್ಣವಾಗಿದ್ದು ಮುದ್ರಣ ವಿವರ ಅಸ್ಪಷ್ಟ)
  2. ಜೈಮಿನಿ ಭಾರತ -ಟಿ ಕೃಷ್ನಯ್ಯ ಶೆಟ್ಟಿ & ಸಂನ್ಸ ಬಳೆಪೇಟೆ ಬೆಂಗಳೂರು.