ಜ್ಞಾನದಿಂದ ನಿಮ್ಮನರಿದಿಹೆನೆಂದಡೆ: ಅರಿವಿಂಗೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಜ್ಞಾನದಿಂದ ನಿಮ್ಮನರಿದಿಹೆನೆಂದಡೆ: ಅರಿವಿಂಗೆ ಬಂದಾಗಲೆ ಕುರುಹು. ಕುರುಹಿಂಗೆ ಕೇಡುಂಟು; ಜ್ಞಾನವೆಂಬುದೇನು ? ಮನೋಭೇದ ! ಇಂತಪ್ಪ ಜ್ಞಾನದ ಕೈಯಲ್ಲಿ
ಅರುಹಿಸಿಕೊಂಡಡೆ ನೀ ದೇವನಲ್ಲ
ಅರಿಯದಿದ್ದಡೆ ನಾ ಶರಣನಲ್ಲ. ನೀ ದೇವ
ನಾ ಶರಣನೆಂತಾದೆ ಹೇಳಾ ಗುಹೇಶ್ವರಾ ?