ಜ್ಞಾನದುದಯವೇ ಭಕ್ತ, ಜ್ಞಾನದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಜ್ಞಾನದುದಯವೇ ಭಕ್ತ
ಜ್ಞಾನದ ಶೂನ್ಯವೇ ಐಕ್ಯ. ಇಂತೀ ಜ್ಞಾನದಾದ್ಯಂತವನರಿವರಿವೆ ಸರ್ವಜ್ಞನಾದ ಈಶ್ವರ ನೋಡಾ. ಅದೆಂತೆಂದಡೆ: ``ಚಿದೋದಯಶ್ಚ ಸದ್ಭಕ್ತೋ ಚಿತ್ಯೂನ್ಯಂಚೈಕ್ಯಮೇವ ಚ ಉಭಯೋರೈಕ್ಯ ವಿಜ್ಞೇಯಾತ್ಸರ್ವಜ್ಞಮೀಶ್ವರಃ (?) ಎಂದುದಾಗಿ ಇಂತೀ ಷಟ್ಸ್ಥಲದೊಳಗಾದ್ಯಂತವಡಗಿಹ ಭೇದವ ನೀ ನಲ್ಲದನ್ಯರೆತ್ತ ಬಲ್ಲರು ಗುಹೇಶ್ವರಾ.