ಜ್ಞಾನೋದಯವಾಗಿ ಷಟ್‍ಸ್ಥಲದ ನಿರ್ಣಯವೆಂತುಟೆಂದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಜ್ಞಾನೋದಯವಾಗಿ ಷಟ್‍ಸ್ಥಲದ ನಿರ್ಣಯವೆಂತುಟೆಂದು ವಿಚಾರಿಸೆ: ಮೊದಲಲ್ಲಿ ಭಕ್ತಸ್ಥಲವೆಂತು ಹೇಳಿತ್ತು_ ಅಂತೆ ನಡೆದು ಪೂರೈಸಿ ಮಾಹೇಶ್ವರಸ್ಥಲಕ್ಕೆ ಬಂದು
ಮಾಹೇಶ್ವರಸ್ಥಲವೆಂತು ಹೇಳಿತ್ತು_ ಅಂತೆ ನಡೆದು ಪೂರೈಸಿ ಪ್ರಸಾದಿಸ್ಥಲಕ್ಕೆ ಬಂದು
ಪ್ರಸಾದಿಸ್ಥಲವೆಂತು ಹೇಳಿತ್ತು_ ಅಂತೆ ನಡೆದು ಪೂರೈಸಿ ಪ್ರಾಣಲಿಂಗಿಸ್ಥಲಕ್ಕೆ ಬಂದು
ಪ್ರಾಣಲಿಂಗಿಸ್ಥಲವೆಂತು ಹೇಳಿತ್ತು_ ಅಂತೆ ನಡೆದು ಪೂರೈಸಿ ಶರಣಸ್ಥಲಕ್ಕೆ ಬಂದು
ಶರಣಸ್ಥಲವೆಂತು ಹೇಳಿತ್ತು_ ಅಂತೆ ನಡೆದು ಪೂರೈಸಿ ಐಕ್ಯಸ್ಥಲಕ್ಕೆ ಬಂದು
ಐಕ್ಯಸ್ಥಲವೆಂತು ಹೇಳಿತ್ತು_ ಅಂತೆ ನಡೆದು ಪೂರೈಸಿ ನಿರವಯಸ್ಥಲಕ್ಕೆ ಬಂದು ನಿರಾಳಕ್ಕೆ ನಿರಾಳನಾದೆನಯ್ಯಾ ಗುಹೇಶ್ವರಾ.