ಜ್ಯೋತಿಯ ತಮವೆಡೆಗೊಡಂತೆ ಚಂದ್ರಮನ
ಗೋಚರ
ಲೇಖಕರು: ಲೇಖಕರ ಕೃತಿಗಳು
ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಈ ಕೃತಿಯ ಪುಟಗಳು
ಜ್ಯೋತಿಯ ತಮವೆಡೆಗೊಡಂತೆ ಚಂದ್ರಮನ ರಾಹುಎಡೆಗೊಂಡಂತೆ ನಿಧಾನವ ಸರ್ಪನೆಡೆಗೊಂಡಂತೆ ಅಂಬುದ್ಥಿಯ ಅನಲನೆಡೆಗೊಂಡಂತೆ ಮನವ ಮಾಯವಡೆಗೊಂಡು ನಿಮ್ಮ ನೆನಹ ನೆಲೆಗೊಳಲೀಯದೆ ಮರಣಕ್ಕೊಳಗುಮಾಡುತ್ತಿಪ್ಪುದಯ್ಯ. ಈ ತಮವ ಪರಿಹರಿಸಿ ಎನ್ನನುಳುಹಿಕೊಳ್ಳಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.