ತಂಗಾಳಿ ಪರಿಮಳದೊಡಗೂಡಿ ಸುಳಿವಂತೆ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತಂಗಾಳಿ ಪರಿಮಳದೊಡಗೂಡಿ ಸುಳಿವಂತೆ
ಆ ಸುಳುಹಾಗಿ ಸುಳಿಯಬೇಕು. ನಿಂದಡೆ ನೆಟ್ಟನೆ ಭಕ್ತನಾಗಿ ನಿಂದು ಸಹಜ ಮಾಟವ ಮಾಡಬೇಕು. ಸುಳಿದಡೆ ನೆಟ್ಟನೆ ಪರಮಜಂಗಮವಾಗಿ ಸುಳಿಯಬೇಕು. ನಿಂದು ಭಕ್ತನಾಗಲರಿಯದ
ಸುಳಿದು ಜಂಗಮವಾಗಲರಿಯದ ಉಭಯಭ್ರಷ್ಟರನೇನೆಂಬೆನಯ್ಯಾ ಗುಹೇಶ್ವರಾ.