ವಿಷಯಕ್ಕೆ ಹೋಗು

ತಂದೆಯ ಸಾಮಥ್ರ್ಯದಿಂದ ಹುಟ್ಟಿದ

ವಿಕಿಸೋರ್ಸ್ದಿಂದ


Title vachana saahitya
Author Tomtada Siddalingeshwara ShivaYogigaLu
Year 1550-1600 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ತಂದೆಯ ಸಾಮಥ್ರ್ಯದಿಂದ ಹುಟ್ಟಿದ ಮಗನಿಗೆ ಆ ತಂದೆಯ ಸ್ವರೂಪಲ್ಲದೆ ಬೇರೊಂದೂ ಸ್ವರೂಪೆಂದು ತಿಳಿಯಲುಂಟೇ ಅಯ್ಯ?. ಶಿವ ತಾನೆ ತನ್ನ ಸಾಮಥ್ರ್ಯವೆ ಒಂದೆರಡಾಗಿ
ಗುರುವೆಂದು ಶಿಷ್ಯನೆಂದು ಆಯಿತ್ತೆಂದಡೆ
ಆ ಗುರುವಿಂಗೂ ಶಿಷ್ಯಂಗೂ ಬೇರಿಟ್ಟು ನುಡಿಯಲಾಗದಯ್ಯ. ಗುರುವಿನ ಅಂಗವೇ ಶಿಷ್ಯ; ಶಿಷ್ಯನ ಅಂಗವೇ ಗುರು. ಆ ಗುರುವಿನ ಪ್ರಾಣವೇ ಶಿಷ್ಯ; ಶಿಷ್ಯನ ಪ್ರಾಣವೇ ಗುರು. ಈ ಗುರುಶಿಷ್ಯಸಂಬಂಧ ಒಂದಾದ ಬಳಿಕ ಗುರು ಶಿಷ್ಯರೆಂದು ಬೇರಿಟ್ಟು ನುಡಿವ ಭ್ರಷ್ಟರನೇನೆಂಬೆನಯ್ಯಾ. ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.