ತತ್ವವನರಿದೆಹೆನೆಂದು ಮೃತ್ಯುವ ಕರೆಕೊಂಡೆನಯ್ಯಾ.
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ತತ್ವವನರಿದೆಹೆನೆಂದು ಮೃತ್ಯುವ ಕರೆಕೊಂಡೆನಯ್ಯಾ. ನಾನೆತ್ತ ಬಲ್ಲೆ ನಿಮ್ಮ ಶರಣರಂತುವನು ನಾನೆತ್ತ ಬಲ್ಲೆ ನಿಮ್ಮ ಪ್ರಮಥರಂತುವನು ಸರ್ವಾಪರಾಧಿ ನಾನು. ಎನ್ನ ಮನದ ಕೊನೆಯ ಸೂತಕ ಹಿಂಗದು
ಕೂಡಲಸಂಗಮದೇವಾ. 327