Library-logo-blue-outline.png
View-refresh.svg
Transclusion_Status_Detection_Tool

ತನುವರ್ಪಿತವೆಂದಡೆ ಗುರುದ್ರೋಹ. ಮನವರ್ಪಿತವೆಂದಡೆ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ತನುವರ್ಪಿತವೆಂದಡೆ ಗುರುದ್ರೋಹ. ಮನವರ್ಪಿತವೆಂದಡೆ ಲಿಂಗದ್ರೋಹ. ಧನವರ್ಪಿತವೆಂದಡೆ ಜಂಗಮದ್ರೋಹ_ ಇಂತೀ ತನುಮನಧನಗಳೆಂಬ ಅನಿತ್ಯವನು ನಿತ್ಯಕ್ಕರ್ಪಿಸಿ ಭಕ್ತನಾದೆನೆಂದಡೆ
ಅದು ಅಜ್ಞಾನ ನೋಡಾ. ಒಡೆಯರಿಗೆ ಉಂಡೆಯ ಮುರಿದಿಕ್ಕಿ ನಾ ಭಕ್ತನೆಂಬ ಮಾತ ಸಮ್ಯಕ್ ಶರಣರು ಮೆಚ್ಚುವರೆ ? ನಮ್ಮ ಗುಹೇಶ್ವರಲಿಂಗಕ್ಕೆ
ನೀನು ಆವುದರಲ್ಲಿ ಏನನರ್ಪಿಸಿ ಭಕ್ತನಾದೆ ಹೇಳಾ ಸಂಗನಬಸವಣ್ಣಾ ?