Library-logo-blue-outline.png
View-refresh.svg
Transclusion_Status_Detection_Tool

ತನುವಿನಲ್ಲಿ ತನು ಸವೆಯದು,

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ತನುವಿನಲ್ಲಿ ತನು ಸವೆಯದು
ಮನದಲ್ಲಿ ಮನ ಸವೆಯದು
ಧನದಲ್ಲಿ ಧನ ಸವೆಯದು. ಭಕ್ತಿಯುಕ್ತಿಯ ಮಾತು ನಿನಗೇಕೆ ಹೇಳಾ ಬಸವಾ ? ಮಾಟಕೂಟವೆಂಬ ಕೀರ್ತಿವಾರ್ತೆಗೆ ಸಿಲುಕಿ ಜಂಗಮವೆ ಲಿಂಗವೆಂಬುದ ಮರೆದೆಯೆಲ್ಲಾ ಬಸವಣ್ಣಾ ! ಗುಹೇಶ್ವರನ ಶರಣರಿಗೆ ತ್ರಿಕರಣವನೊಪ್ಪಿಸಿದಲ್ಲದೆ ಭಕ್ತನಾಗಬಾರದು ಕಾಣಾ ಸಂಗನಬಸವಣ್ಣಾ.