ತನುವಿನ ಗುಣವ ವಿವರಿಸಿಹೆನೆಂದೆಡೆ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತನುವಿನ ಗುಣವ ವಿವರಿಸಿಹೆನೆಂದೆಡೆ
ಮನ ಶುದ್ಧವಾಗಬೇಕು. ಮನದ ಗುಣವ ವಿವರಿಸಿಹೆನೆಂದೆಡೆ ಇಂದ್ರಿಯಂಗಳು
ಶುದ್ಧವಾಗಬೇಕು. ತನು ಮನ ಇಂದ್ರಿಯಂಗಳು ಶುದ್ಧ ಸುಯಿಧಾನವಾಗಿ ಲಿಂಗಮುಖಕ್ಕೆ ವೇದ್ಯವಾದಲ್ಲದೆ ಗುಹೇಶ್ವರನ ಬೆರಸಬಾರದು ಕೇಳಾ ತಾಯೆ.