ತನುವಿನ ತೊಳಲಿ ವಿಕಾರದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತನುವಿನ ವಿಕಾರದ ಕತ್ತಲೆಯಲ್ಲಿ ಸಿಲ್ಕಿ
ಕಂಗೆಟ್ಟು ಕಳವಳಿಸಿ ತೊಳಲಿ ಬಳಲಿದೆನಯ್ಯ. ಮನದ ವಿಕಾರದ ಮರವೆಯಲ್ಲಿ ಸಿಲ್ಕಿ
ಮಣ್ಣುಮಸಿಯಾಗಿ ಬಣ್ಣಗೆಟ್ಟೆನಯ್ಯ. ಈ ತನುಮನದ ವಿಕಾರವ ಮಾಣಿಸಿ
ನಿಮ್ಮ ಭಕ್ತಿಯ ವಿಕಾರದಲ್ಲಿರಿಸಿ ಸಲಹಯ್ಯ ಎನ್ನ ಅಖಂಡೇಶ್ವರಾ.