ತನುವೆಂಬುದೊಂದು ಹುತ್ತಕ್ಕೆ ಒಂಬತ್ತು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತನುವೆಂಬುದೊಂದು ಹುತ್ತಕ್ಕೆ ಒಂಬತ್ತು ಬಾಗಿಲು; ತಾಮಸವೆಂಬ ಸರ್ಪಂಗೆ ತಲೆ ಹದಿನಾಲ್ಕು; ಒಡಲಾರು. ಬಾಲವ ಬ್ರಹ್ಮಲೋಕಕ್ಕಿಟ್ಟು
ಶಿರವ ಹರಿದ್ವಾರದಲ್ಲಿರಿಸಿ
ಕರಣೇಂದ್ರಿಯಂಗಳೆಂಬ ಕಾಳಕೂಟ ವಿಷವನೆ ಉಗುಳುತ್ತಿದೆ ನೋಡಾ. ಆ ವಿಷವು ಶಿವಶರಣರಲ್ಲದವರನೆಲ್ಲರ ಸುಡುವುದ ಕಂಡೆನು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.