Transclusion_Status_Detection_Tool

ತನುವೆಂಬ ದೇವಸ್ಥಾನದೊಳಗೆ ಮಸ್ತಕಾಗ್ರವೆಂಬ

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು



Pages   (key to Page Status)   


ತನುವೆಂಬ ದೇವಸ್ಥಾನದೊಳಗೆ ಮಸ್ತಕಾಗ್ರವೆಂಬ ಸೆಜ್ಜಾಗೃಹದಲ್ಲಿ ಪ್ರಾಣಲಿಂಗಸ್ವಯಂಬ ಪ್ರತಿಷ್ಠೆಯಾಗಿರಲು
ಗುರುವೆಂಬ ಆರ್ಚಕನು ಮಂತ್ರವೆಂಬ ಆಗಮಿಕನು ಸಹ ಲಿಂಗವೆಂಬ ಉಚ್ಚಾಯ ವಿಗ್ರಹವನು ಕರಸ್ಥಲವೆಂಬ ರಥದಲ್ಲಿ ಮೂರ್ತಿಗೊಳಿಸಿ_ ಆ ಕರಸ್ಥಲವೆಂಬ ರಥಕ್ಕೆ ಜ್ಞಾನಕ್ರಿಯೆ ಎರಡು ಪಾದದ್ವಯ ಎರಡು ಕೂಡಿ ನಾಲ್ಕು ಗಾಲಿಗಳಂ ಹೂಡಿ
ಪಂಚೇಂದ್ರಿಯಗಳೆಂಬ ಪತಾಕೆಗಳಂ ಧರಿಸಿ ಏಕೋಭಾವವೆಂಬ ಕಳಸವನಿಟ್ಟು
ದಶವಾಯುಗಳೆಂಬ ಪಾಶವಂ ಬಂಧಿಸಿ ಷಡಂಗಗಳೆಂಬ ಮೊಳೆಗಳಂ ಬಲಿದು
ಸಪ್ತಧಾತುವೆಂಬ ಝಲ್ಲಿ ಪಟ್ಟೆಯನಲಂಕರಿಸಿ ಅಷ್ಟಮದ ಸಪ್ತವ್ಯಸನಂಗಳೆಂಬ ಆನೆ ಕುದುರೆಗಳು ಸಹ ಮಹಾನಾದವೆಂಬ ಭೇರಿ ವಾದ್ಯಂಗಳಿಂ ಷೋಡಶವಿಕಾರಂಗಳೆಂಬ ನರ್ತಕೀಮೇಳದಾರತಿಯಿಂ ಅಂತಃಕರಣ ಚತುಷ್ಟಯಗಳೆಂಬ ಚಾಮರಧಾರಕರಿಂ ಮನವೆಂಬ ಹೊರಜೆಯಿಂ ಕರಣಂಗಳೆಂಬ ಕಾಲಾಳ್ಗಳಿಂ_ಪಿಡಿಸಿ
_ ಸುಬುದ್ಧಿಯೆಂಬ ಭೂಮಿಯಲ್ಲಿ ಆನಂದವೆಂಬರಸು ರಥಮಂ ನಡೆಸಿ ನೆನಹು ನಿಷ್ಪತ್ತಿಯೆಂಬ ಸ್ಥಾನದಲ್ಲಿ ನಿಲಿಸಿ_ ಇಷ್ಟಲಿಂಗವೆಂಬ ಉಚ್ಚಾಯ ವಿಗ್ರಹವನ್ನು ಹೃದಯಕಮಲವೆಂಬ ಅಂತರಾಳದಲ್ಲಿ ಮೂರ್ತಿಗೊಳಿಸಿ ಆನಂದವೆಂಬ ಅರಸು ನಿರಾಳವೆಂಬ ಅಪರಿಮಿತ ಪಟ್ಟಣವ ಪ್ರವೇಶವಾದನು ಕಾಣಾ ಗುಹೇಶ್ವರಾ.