ತನುವ ಗೆಲಲರಿಯದೆ, ಮನವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತನುವ ಗೆಲಲರಿಯದೆ
ಮನವ ಗೆಲಲರಿಯದೆ ಧನವ ಗೆಲಲರಿಯದೆ
ಭ್ರಮೆಗೊಂಡಿತ್ತು ಲೋಕವೆಲ್ಲವು. ತನುವ ದಾಸೋಹಕ್ಕೆ ಸವೆಸಿ
ಮನವ ಲಿಂಗಧ್ಯಾನದಲ್ಲಿ ಸವೆಸಿ ಧನವ ಜಂಗಮದಲ್ಲಿ ಸವೆಸಿ ಗೆಲಬಲ್ಲಡೆ
ಸಂಗನಬಸವಣ್ಣನಲ್ಲದೆ ಮತ್ತಾರನು ಕಾಣೆ. ಗುಹೇಶ್ವರಾ_ನಿಮ್ಮ ಶರಣ ಸಂಗನಬಸವಣ್ಣಂಗೆ
ನಮೋ ನಮೋ ಎನುತಿರ್ದೆನು.