ತನ್ನನರಿಯೆನೆಂಬುದು ಅಜ್ಞಾನ ನೋಡಾ.
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ತನ್ನನರಿಯೆನೆಂಬುದು ಅಜ್ಞಾನ ನೋಡಾ. ಅರಿಯದ ಅಜ್ಞಾನವ ಅಗಳೆದು ಜ್ಞಾನವ ಕಾಣೆನೆಂಬುದು ವಿಪರೀತ ಭಾವ ನೋಡಾ ! ಎಲ್ಲವನು ತೋರುವ ಘನವನು ಎಲ್ಲಿಯೂ ಕಾಣಬಾರದು. ಕಾಣಬಾರದ ನಿಜವ ತೋರಬಾರದು
ತೋರಬಾರದ ನಿಜವ ತಿಳಿಯಬಾರದು
. ಗುಹೇಶ್ವರಲಿಂಗದಲ್ಲಿ ಬಯಕೆಯುಳ್ಳನ್ನಕ್ಕ ತವಕ ಎಡೆಗೊಂಡಿಪ್ಪ ಕಾರಣ ತಿಳುಹಲಿಲ್ಲವೆಂಬುದ ನಿನ್ನ ನೀ ತಿಳಿದು ನೋಡಾ ಸಿದ್ಧರಾಮಯ್ಯಾ.