ತನ್ನ ತಾನರಿದಡೆ ನುಡಿಯೆಲ್ಲ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತನ್ನ ತಾನರಿದಡೆ ನುಡಿಯೆಲ್ಲ ತತ್ವ ನೋಡಾ ! ತನ್ನ ತಾ ಮರೆದಡೆ ನುಡಿಯೆಲ್ಲ ಮಾಯೆ ನೋಡಾ ! ಅರಿದು ಮರೆದ ಶಿವಯೋಗಿಯ ಶಬ್ದವೆಲ್ಲವು ಉಪದೇಶವಲ್ಲದೆ ಭಿನ್ನವುಂಟೆ ? ನಿನ್ನ ಮನದ ಕಳವಳವ ತಿಳುಹಲೆಂದು ಮಾತನಾಡಿಸಿ ನೋಡಿದಡೆ
ಎನ್ನ ಮನದೊಳಗೆ ಕಂದು ಕಲೆ ಎಂಬುದಿಲ್ಲ ನೋಡಾ ! ನಮ್ಮ ಗುಹೇಶ್ವರಲಿಂಗಕ್ಕೆ ನೀನು ಕರುಣದ ಶಿಶುವಾದ ಕಾರಣ ಬಾಯ್ದೆಗೆದೆನಲ್ಲದೆ
ಭಿನ್ನವುಂಟೆ ಹೇಳಾ ಮರುಳೆ ?