Pages(key to [[Help:Page Status{{!}}Page Status]])
ತನ್ನ ಶಿಷ್ಯ ತನ್ನ ಮಗನೆಂಬುದು ತಪ್ಪದಲಾ. ಏಕೆ? ಆತನ ಧನಕ್ಕೆ ತಂದೆಯಾದನಲ್ಲದೆ ಆತನ ಮನಕ್ಕೆ ತಂದೆಯಾದನೆ ? ಏಕೆ? ಆತನ ಮನವನರಿಯನಾಗಿ ಆತನ ಧನಕ್ಕೆ ತಂದೆಯಾದನು. ತನ್ನಲ್ಲಿರ್ದ ಭಕ್ತಿಯ ಮಾರಿಕೊಂಡುಂಬವರು ನಿಮ್ಮ ನಿಜಭಕ್ತರಲ್ಲವಯ್ಯಾ ಚೆನ್ನಮಲ್ಲಿಕಾರ್ಜುನಾ.