Library-logo-blue-outline.png
View-refresh.svg
Transclusion_Status_Detection_Tool

ತಲೆಯಿಲ್ಲದ ಮೃಗ ಒಡಲಿಲ್ಲದೆ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ತಲೆಯಿಲ್ಲದ ಮೃಗ ಒಡಲಿಲ್ಲದೆ ಆಹಾರವ ಕೊಂಡಿತ್ತು
ಹೆಜ್ಜೆ ಇಲ್ಲದೆ ಹರಿಯಿತ್ತು ! ಅದ ಶುದ್ಧಿಯ ಮಾಡ ಹೋದಾತನಿನ್ನೂ ಮರಳನು. ವೆಜ್ಜವಿಲ್ಲದ ಮಣಿಯ ದಾರವಿಲ್ಲದೆ ಪವಣಿಸುವ ನಿಮ್ಮ ಶರಣನ ಪರಿಯ ನೋಡಾ ಗುಹೇಶ್ವರಾ !