ತಾನು ದಂಡುಮಂಡಲಕ್ಕೆ ಹೋದಹೆನೆಂದಡೆ ನಾನು ಸುಮ್ಮನಿಹೆನಲ್ಲದೆ ತಾನೆನ್ನ ಕೈಯೊಳಗಿದ್ದು ತಾನೆನ್ನ ಮನದೊಳಗಿದ್ದು ಎನ್ನ ಕೂಡದಿದ್ದಡೆ ನಾನೆಂತು ಸೈರಿಸುವೆನವ್ವಾ ? ನೆನಹೆಂಬ ಕುಂಟಿಣಿ ಚೆನ್ನಮಲ್ಲಿಕಾರ್ಜುನನ ನೆರಹದಿದ್ದಡೆ ನಾನೇವೆ ಸಖಿಯೆ ?