ತಾನೆಂದೆನಲೊಲ್ಲದೆ ಗುರುವೆಂದು ಹಿಡಿದವನ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತಾನೆಂದೆನಲೊಲ್ಲದೆ ಗುರುವೆಂದು ಹಿಡಿದವನ
ಗುರುವೆಂದಲ್ಲಿಯೆ ನೀನೆಂದು ನಡೆದವನ
ನೀನೆಂದಲ್ಲಿಯೆ ಲಿಂಗಜಂಗಮದ ಸಕೀಲಸಂಬಂಧವ ನೆಲೆಗೊಳಿಸಿದವನ
ಲಿಂಗಜಂಗಮದಲ್ಲಿ ತನ್ನ ಮರೆದು ಕರಿಗೊಂಡ ಲಿಂಗೈಕ್ಯನ
ಗುಹೇಶ್ವರಲಿಂಗದಲ್ಲಿ ಚನ್ನಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು.