ವಿಷಯಕ್ಕೆ ಹೋಗು

ತಾನೆ ಜಗ, ಜಗವೆಲ್ಲ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya


ತಾನೆ ಜಗ
ಜಗವೆಲ್ಲ ತಾನೆಂದರಿದ ಘನವೇದ್ಯನಭೇದರೂಪನಾಗಿ
ಅನ್ಯವಿಲ್ಲದನ್ಯವನರಿಯಲೆಲ್ಲಿಯದೊ ? ನಿರಂಜನ ನಿಜಚಿದ್ರೂಪು ತಾನಾಗಿ ಅರಿವು ತಾನೆಂಬ ಮಾತಿಗೆಡೆಯಲ್ಲಿಯದೊ ? ಅನ್ಯವೆನ್ನದ ತಾನೆನ್ನದಳಿದುಳಿಮೆಯನುಪಮಿಸಬಹುದೆ ? ಅನಪಮಸುಖಸಾರಾಯ
ಕೂಡಲಚೆನ್ನಸಂಗಾ ನಿಮ್ಮ ಶರಣ.