ತಾಪತ್ರಯದಲ್ಲಿ ಬೇವ ಒಡಲ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತಾಪತ್ರಯದಲ್ಲಿ ಬೇವ ಒಡಲ ಹಿಡಿದು ತಂದು ಜ್ಞಾನವೆಂಬ ಉರಿಗೆ ಆಹುತಿಯ ಕೊಟ್ಟವನ
ಜ್ಞಾನವೆಂಬ ಕಾಯವ ಹಿಡಿದು ತಂದು ನಿಶ್ಶೂನ್ಯವೆಂಬ ತೇಜದಲ್ಲಿ ಸುಟ್ಟವನ
ನಿಶ್ಶೂನ್ಯವೆಂಬ ಶಬ್ದವ ಸುಟ್ಟು
ಭಸ್ಮವ ಧರಿಸಿದ ಲಿಂಗೈಕ್ಯನ
ಲೋಕದ ಸ್ಥಿತಿ_ಗತಿಯ ಮರೆದು
ನಿರ್ವಾಣದಲ್ಲಿ ನಿಂದವನ
ಗುಹೇಶ್ವರಲಿಂಗದಲ್ಲಿ ತನ್ನ ಮರೆದ ಅಲ್ಲಯ್ಯನ ಕೋಪದಲ್ಲಿ ಕಿಚ್ಚಿನಲ್ಲಿ ಸುಟ್ಟಿಹೆನೆಂಬ ಸಿದ್ಧರಾಮಯ್ಯನನೇನೆಂಬೆನು ?