ವಿಷಯಕ್ಕೆ ಹೋಗು

ತಾಯಿಯಿಲ್ಲದ ಶಿಶುವಿಂಗೆ, ಶಿಶುವಿಲ್ಲದ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ತಾಯಿಯಿಲ್ಲದ ಶಿಶುವಿಂಗೆ
ಶಿಶುವಿಲ್ಲದ ತಾಯಿ ಮೊಲೆಯನೂಡಿದಳು. ಮೊಲೆವಾಲನುಂಡ ಶಿಶು ತಾಯ ತಕ್ಕೈಸಿದಡೆ ತಾಯಿ ಆ ಶಿಶುವಿಂಗೆ ಸತಿಯಾದಳಲ್ಲಾ ! ಸತಿಯ ಸಂಗದ ಸುಖವ ಪತಿಯಿಲ್ಲ (ಯಿಂ?)ದರಿದಲ್ಲಿ ಸತಿ ಪತಿ ಎಂಬೆರಡೂ ಅಳಿಯಿತ್ತು ನೋಡಾ ! ಈ ನಿಜದ ನಿರ್ಣಯವ ಎನಗೆ ತೋರಿದ ಗುಹೇಶ್ವರನ ಶರಣ ಮಡಿವಳ ಮಾಚಿತಂದೆಗಳ ಪಾದಕ್ಕೆ ನಮೋ ನಮೋ ಎನುತಿರ್ದೆನು.