ತಾಯಿ ತಂದೆಯಿಲ್ಲದ ಕಂದಾ, ನಿನಗೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತಾಯಿ_ತಂದೆಯಿಲ್ಲದ ಕಂದಾ
ನಿನಗೆ ನೀನೆ ಹುಟ್ಟಿ ಬೆಳೆದೆಯಲ್ಲಾ ! ನಿನ್ನ ಪರಿಣಾಮವೆ ನಿನಗೆ ಪ್ರಾಣತೃಪ್ತಿಯಾಗಿರ್ದೆಯಲ್ಲಾ ! ಭೇದಕರಿಗೆ ಅಭೇದ್ಯನಾಗಿ ನಿನ್ನ ನೀನೆ ಬೆಳಗುತ್ತಿರ್ದೆಯಲ್ಲಾ ! ನಿನ್ನ ಚರಿತ್ರ ನಿನಗೆ ಸಹಜ ಗುಹೇಶ್ವರಾ.