ತಾಯಿ ಬಂಜೆಯಾದಲ್ಲದೆ ಶಿಶು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತಾಯಿ ಬಂಜೆಯಾದಲ್ಲದೆ ಶಿಶು ಗತವಾಗದು. ಬೀಜ ನಷ್ಟವಾದಲ್ಲದೆ ಸಸಿ ಗತವಾಗದು. ನಾಮ ನಷ್ಟವಾದಲ್ಲದೆ ನೇಮ ನಷ್ಟವಾಗದು. ಮೊದಲು ಕೆಟ್ಟಲ್ಲದೆ ಲಾಭದಾಸೆ ಬಿಡದು. ಗುಹೇಶ್ವರನೆಂಬ ಲಿಂಗದ ನಿಜವನೆಯ್ದುವಡೆ
ಪೂಜೆಯ ಫಲ ಮಾದಲ್ಲದೆ ಭವಂ ನಾಸ್ತಿಯಾಗದು.