Library-logo-blue-outline.png
View-refresh.svg
Transclusion_Status_Detection_Tool

ತುದಿ ಮೊದಲಿಲ್ಲದ ಘನವ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ತುದಿ ಮೊದಲಿಲ್ಲದ ಘನವ ನೋಡಾ
ಒಳಹೊರಗಿಲ್ಲದಿಪ್ಪ ಅನುವ ನೋಡಾ
ಗುರುಲಿಂಗಜಂಗಮ ತಾನೆಯಾಗಿ
ಮತ್ತೆ ತಾನೆಂಬುದೇನೂ ಇಲ್ಲದ ಪರಿಯ ನೋಡಾ ! ತನ್ನ ತಾನಿರ್ದೆಸೆಯ ಮಾಡಿಕೊಂಡು ನಿಜಪದವನೆಯ್ದಿಪ್ಪ ಪರಿಯ ನೋಡಾ. ಕೂಡಲಚೆನ್ನಸಂಗಮದೇವರಲ್ಲಿ ಪ್ರಸಾದಿಯಾಗಿಪ್ಪ ಮರುಳಶಂಕರದೇವರ ನಿಲವ ನೋಡಾ !