ವಿಷಯಕ್ಕೆ ಹೋಗು

ತುರಿಯಮೇಲೆ ಉಗುರನಿಕ್ಕಿದರೆ, ಹಿತವಾಗಿಹುದು;

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya


ತುರಿಯಮೇಲೆ ಉಗುರನಿಕ್ಕಿದರೆ
ಹಿತವಾಗಿಹುದು; ಒತ್ತಿ ತುರಿಸಿದಡೆ ಒಡಲೆಲ್ಲಾ ಉರಿದ ದೃಷ್ಟಾಂತರದಂತೆ
ವಿಷಯ ತೋರಿದಡೆ ಯೋನಿ ಚಕ್ರವ ನಿಶ್ಚಯಿಸುವುದು ಆ ವಿಷಯ ತೀರಿದ ಬಳಿಕ ಆ ಯೋನಿ ಸ್ನಾನದಕುಳಿಯಿಂದ ಕಡೆಯಾಗಿಪ್ಪುದು ನೋಡ. ಸತಿಯೆಂಬುವಳು ಸತ್ತ ಶವಕಿಂದ ಕಡೆಯಾಗಿಪ್ಪಳು ನೋಡ. ಅಪ್ಪಬಾರದು ಅಪ್ಪಬಾರದು; ಅತಿ ಹೇಸಿಕೆ. ಪಶುಪತಿ ನೀ ಮಾಡಿದ ವಿಷಯವಿದ್ಥಿ ಈರೇಳು ಲೋಕವನಂಡೆಲೆವುತ್ತಿದೆ ನೋಡಾ. ಈ ಸಂಸಾರ ಪ್ರಪಂಚ ದೇವದಾನವ ಮಾನವರು ಪರಿಹರಿಸಲಾರದೆ ಆಳುತ್ತ ಮುಳುಗತ್ತಲಿಪ್ಪರು ನೋಡಾ. ಇದು ಕಾರಣ
ಸದಾಶಿವನನರಿದು ನೆನೆಯಲು ಸಂಸಾರಪ್ರಪಂಚು ಕೆಡುವುದು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.