ತೆರಹಿಲ್ಲದ ಘನವು ಮನದೊಳಗೆ
ಗೋಚರ
ಲೇಖಕರು: ಚೆನ್ನಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ತೆರಹಿಲ್ಲದ ಘನವು ಮನದೊಳಗೆ ನಿಂದು ನೆಲೆಗೊಂಡ ಬಳಿಕ
ಆ ಘನವ ತೆರೆಯ ಮರೆಯಲಡಗಿಸಿಹೆನೆಂದಡೆ ಅಡಗುವುದೆ ? ಹೇಮಗಿರಿಯ ಕದ್ದು ಭೂಮಿಯಲಡಗಿಸಿಹೆನೆಂದಡೆ ಆ ಕಳವು ಸಿಕ್ಕದೆ ಮಾಣ್ಬುದೆ ? ಕೂಡಲಚೆನ್ನಸಂಗನ ಶರಣ ಪ್ರಭುವಿನಲ್ಲಿ ಬೆರಸಿದ ಸುಖವ ಮರೆಸಿಹೆನೆಂದಡೆ ನಿನ್ನಳವೆ ಹೇಳಾ ಸಂಗನಬಸವಣ್ಣಾ ?