Library-logo-blue-outline.png
View-refresh.svg
Transclusion_Status_Detection_Tool

ತೆರಹಿಲ್ಲದ ಮಹಾಘನ ಪರಿಪೂರ್ಣ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ತೆರಹಿಲ್ಲದ ಮಹಾಘನ ಪರಿಪೂರ್ಣ ಲಿಂಗಭರಿತವೆಂದೇ ಭಾವಿಸಿ
ಪೂಜಿಸಿ
ಮರಳಿ ಬಿದ್ದಿತ್ತು ಕೆಡೆಯಿತ್ತು ಎಂಬ ಅಜಾÕನವ ನೋಡಾ ! ತೆರಹಿಲ್ಲದ ಪರಿಪೂರ್ಣ ಲಿಂಗವು
ಬೀಳಲಿಕ್ಕೆ ತೆರಹುಂಟೆ ? ಅರಿಯರು ಪ್ರಾಣಲಿಂಗದ ನೆಲೆಯನು. ಅರಿಯದೆ ಅಜಾÕನದಲ್ಲಿ ಕುರುಹು ಬಿದ್ದಿತ್ತೆಂದು ಪ್ರಾಣಘಾತವ ಮಾಡಿಕೊಂಡು ಸಾವ ಅಜಾÕನಿಗ? ನೋಡಾ ! ಅರದು ಕೂಡಿ ಸ್ವಯವಾಗಿರ್ದ ಲಿಂಗವು ಓಕರಿಸಿತ್ತೆಂದು ಆ ಲಿಂಗದೊಡನೆ ಪ್ರಾಣಘಾತವ ಮಾಡಿಕೊಂಡು ಸಾವ ಅಜಾÕನಿಗಳಿಗೆ ಅಘೋರ ನರಕ ತಪ್ಪದು ಕಾಣಾ_ ಕೂಡಲಚೆನ್ನಸಂಗಮದೇವಾ.