ತೊರೆಯುದಕವ ಕೆರೆಯುಂಡು ತೃಪ್ತವಾಗಲು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ತೊರೆಯುದಕವ ಕೆರೆಯುಂಡು ತೃಪ್ತವಾಗಲು ಆ ಕೆರೆಯುದಕವ ಹಲವು ಕೆಲವು ಸ್ಥಾವರ ಜಂಗಮಗಳುಂಡು ತೃಪ್ತಿವಡೆವಂತೆ
ಪ್ರಭುದೇವರ ತೃಪ್ತಿ ಅಸಂಖ್ಯಾತಮಹಾಗಣಂಗಳೆಲ್ಲಕ್ಕೆ ತೃಪ್ತಿಯಾಯಿತ್ತು ನೋಡಾ. ಬಸುರುವೆಂಡತಿ ಉಂಡಲ್ಲಿ ಒಡಲ ಶಿಶು ತೃಪ್ತಿಯಾದಂತೆ
ಸಚರಾಚರವೆಲ್ಲವು ತೃಪ್ತಿಯಾದವು ನೋಡಾ. ಕೂಡಲಸಂಗಮದೇವಾ
ನಿಮ್ಮ ಶರಣ ಪ್ರಭುದೇವರ ಪ್ರಸಾದಮಹಿಮೆಗೆ ನಮೋ ನಮೋ ಎಂಬೆನು.