ತ್ರಿಪುರವನುರುಹಿದ ತ್ರಿಣೇತ್ರನಲ್ಲ, ಅಂಧಕಾಸುರನ

ವಿಕಿಸೋರ್ಸ್ದಿಂದ



Pages   (key to Page Status)   


ತ್ರಿಪುರವನುರುಹಿದ ತ್ರಿಣೇತ್ರನಲ್ಲ
ಅಂಧಕಾಸುರನ ಮೆಟ್ಟಿ ನಾಟ್ಯವನಾಡಿದಾತನಲ್ಲ
ಖಂಡಕಪಾಲಿಯಲ್ಲ ಮುಂಡಧಾರಿಯಲ್ಲ
ಮಂಡಲದೊಳಗೆ ಬಂದು ಸುಳಿವಾತನಲ್ಲ
ಈಶ್ವರನಲ್ಲ ಮಹೇಶ್ವರನಲ್ಲ
ಗುಹೇಶ್ವರನೆಂಬ ಲಿಂಗ ಅಪಾರ ಮಹಿಮನು.