ದರ್ಪಣದೊಳಗಣ ಅದಕ್ಕೆ ರೂಹಿಗೆ
ಗೋಚರ
ಲೇಖಕರು: ಷಣ್ಮುಖಸ್ವಾಮಿ
ಶೀರ್ಷಿಕೆ: vachana saahitya
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ದರ್ಪಣದೊಳಗಣ ರೂಹಿಗೆ ಚೇಷ್ಟಾಭಾವ ಉಂಟೆಂದಡೆ ನೋಡುವಾತನ ಚೇತನದಿಂದಲ್ಲದೆ
ಅದಕ್ಕೆ ಬೇರೆ ಚೇತನ ಉಂಟೆ ಅಯ್ಯ ? ಎನ್ನ ಕರಣೇಂದ್ರಿಯಂಗಳು ಚೇಷ್ಟಿಸಿದುವೆಂದಡೆ
ನಿಮ್ಮ ಚೇತನದಿಂದಲ್ಲದೆ ಅವಕೆ ಬೇರೆ ಚೇತನ ಉಂಟೆ ಅಯ್ಯ ? ಸೂತ್ರದ ಬೊಂಬೆಯಂತೆ ನೀನಾಡಿಸಿದಂತೆ ನಾನಾಡುತಿರ್ದೆನಯ್ಯ ಅಖಂಡೇಶ್ವರಾ.