ವಿಷಯಕ್ಕೆ ಹೋಗು

ದರ್ಪಣದೊಳಗಣ ರೂಹಿಂಗೆ ಆ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ದರ್ಪಣದೊಳಗಣ ರೂಹಿಂಗೆ ಆ ದರ್ಪಣವೆ ಉತ್ಪತ್ತಿ ಸ್ಥಿತಿ ಲಯವಲ್ಲದೆ ಮತ್ರ್ಯಲೋಕದೊಳಗಣ ಆಕೃತಿ ಅಲ್ಲಿಲ್ಲವೇಕಯ್ಯಾ ? ಆ ಲೋಕದೊಳಗೆ ಉತ್ಪತ್ಯ(ತ್ತಿ ?) ಸ್ಥಿತಿ ಲಯ_ಇದೆಂತಹ ಕರ್ಮಬದ್ಧರು ? ಒಂದರ ಪರಿ ಒಂದಕ್ಕಿಲ್ಲ ಕಂಡಿರೆ ! ದೃಷ್ಟವಹ ಗುರುಹಸ್ತದೊಳಗಣ ಸದ್ಭಕ್ತಂಗೆ
ಅಲ್ಲಿಯ ಉತ್ಪತ್ತಿ ಸ್ಥಿತಿ ಲಯ_ಇದೆಂತಹ ಕರ್ಮದ ಪರಿಯೊ ? ಮತ್ತಾವ ಪರಿಯೂ ಇಲ್ಲ
ಲಿಂಗದ ಪರಿಯ ಮಾಡಿದ ಗುಹೇಶ್ವರ.