ದೇವ ದೇವ ಮಹಾಪ್ರಸಾದ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ದೇವ ದೇವ ಮಹಾಪ್ರಸಾದ ! ನಿಮ್ಮಡಿಗಳೆಂದಂತೆಯಲ್ಲದೆ ಎನಗೆ ಬೇರೆ ಸ್ವತಂತ್ರವುಂಟೆ ದರ್ಪಣದೊಳಗಣ ಪ್ರತಿಬಿಂಬವ ನೋಡುವ ಮುಖಕ್ಕೆ ಬ್ಥಿನ್ನಭಾವವುಂಟೆ ಚರಿಸಿ ಬಪ್ಪ ಅನಂತ ಸುಳುಹಿನೊಳಗೆ ನೀನೊಬ್ಬನೆ
ನಿನ್ನೊಳಗೆ ಅನಂತ ಸುಳುಹು ಅಡಗಿದವು. ನಿಮಗೆ ಮಾಡಿದ ಸಯದಾನವ ನಿಮಗೆ ನೀಡುವೆನು
ಅವಧರಿಸಬೇಕಯ್ಯಾ
ಕೂಡಲಸಂಗಮದೇವಾ.