Library-logo-blue-outline.png
View-refresh.svg
Transclusion_Status_Detection_Tool

ದೇಹವೆಂಬೆರಡಕ್ಕರವನು ಜೀವವೆಂದರಿದೆನಯ್ಯಾ, ಜೀವವೆಂಬೆರಡಕ್ಕರವನು

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ದೇಹವೆಂಬೆರಡಕ್ಕರವನು ಜೀವವೆಂದರಿದೆನಯ್ಯಾ
ಜೀವವೆಂಬೆರಡಕ್ಕರವನು ಹಂಸನೆಂಬ ದಳಕ್ಕೆ ವಿಭಾಗಿಸಿದೆನಯ್ಯಾ. ಹಂಸವೆಂಬೆರಡಕ್ಕರವನು ಜ್ಞಾನಚಕ್ಷುವಿನ ಭ್ರೂಮಧ್ಯದಲ್ಲಿ ವಿಭಾಗಿಸಿದೆನಯ್ಯಾ. ಒಂದು ದಳವ ಕರ್ತನ ಮಾಡಿ ಒಂದು ದಳವ ಭೃತ್ಯನ ಮಾಡಿ ಈ ಎರಡು ದಳದ ನಡುವಿರ್ಪ ಪರಂಜ್ಯೋತಿಯನು ತ್ರಿಕೂಟವೆಂದರಿದು ಕೂಡಿದೆನಯ್ಯಾ. ಇಂತು ಕೂಡಿದಲ್ಲಿ ಪರಿಚರ್ಯವ ಮಾಡುತಿರ್ದೆನಯ್ಯಾ. ಮೊದಲ ಪರಿಚರ್ಯದಲ್ಲಿ ನಿರ್ಮಳೋದಕವ ತುಂಬಿದೆ
ಒಂದು ದಳದೊಳಗೆ. ಎರಡನೆಯ ಪರಿಚರ್ಯದಲ್ಲಿ ಒಂದು ದಳದಲ್ಲಿ ಆ ಉದಕವ ಗಡಣಿಸುತಿರ್ದೆನಯ್ಯಾ. ಇರಲಿರಲು ಎರಡು ದಳವು ಅಳಿದು ಜಲ ಮೇರೆದಪ್ಪಲು ಮನ ಮೇರೆದಪ್ಪಿ ಆರೋಗಿಸಿದೆನಯ್ಯಾ. ಆರೋಗಿಸಿದ ತೃಪ್ತಿಯ ನೀನೆ ಬಲ್ಲೆ
ಕೂಡಲಸಂಗಮದೇವಾ.