ದೇಹಿಗೆ ದೇಹಿಯಾಗಿರ್ಪುದರ ಭೇದವನು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ದೇಹಿಗೆ ದೇಹಿಯಾಗಿರ್ಪುದರ ಭೇದವನು ಆರು ಬಲ್ಲರು ? ಹರಿಬ್ರಹ್ಮಾದಿಗಳರಿಯರು
ಮನುಮುನಿಗಳರಿಯರು
ಸಿದ್ಧಸಾಧಕರರಿಯರು. ಅರಿವಿಂಗೆ ಅರಿವಾಗಿರ್ಪುದನು ನಿನ್ನ ಅರಿವಿಂದ ಅರಿಯಬಹುದೆ ? ಗುಹೇಶ್ವರಲಿಂಗವನರಿವಡೆ ನೀನರಿಯದಂತಿರಬೇಕು.