ಧರಣಿಯ ಮೇಲೊಂದು ಹಿರಿದಪ್ಪ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಧರಣಿಯ ಮೇಲೊಂದು ಹಿರಿದಪ್ಪ ಅಂಗಡಿಯನಿಕ್ಕಿ
ಹರದ ಕುಳ್ಳಿರ್ದ ನಮ್ಮ ಮಹಾದೇವಸೆಟ್ಟಿ. ಒಮ್ಮನವಾದಡೆ ಒಡನೆ ನುಡಿವನು
ಇಮ್ಮನವಾದಡೆ ನುಡಿಯನು. ಕಾಣಿಯ ಸೋಲ
ಅರ್ಧಗಾಣಿಯ ಗೆಲ್ಲ
ಜಾಣ ನೋಡವ್ವಾ
ನಮ್ಮ ಕೂಡಲಸಂಗಮದೇವ. 115