ಧರೆಯಾಕಾಶವಿಲ್ಲದಂದು, ಅನಲ ಪವನ
ಗೋಚರ
ಲೇಖಕರು: ChennaBasavanna
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಧರೆಯಾಕಾಶವಿಲ್ಲದಂದು
ಅನಲ ಪವನ ಜಲ ಕೂರ್ಮರಿಲ್ಲದಂದು
ಚಂದ್ರಸೂರ್ಯರೆಂಬವರು ಕಳೆದೋರದಂದು
ಆತ್ಮಸ್ಥಲ ಅನುಭಾವಕ್ಕೆ ಬಾರದಂದು
ನಿತ್ಯನಿಜಲಿಂಗವ ಬಲ್ಲರಾರಯ್ಯ ನೀವಲ್ಲದೆ ? ಮಹಾಘನಕ್ಕೆ ಘನವಾಹನವಾಗಿ
ಅಗಮ್ಯಸ್ಥಾನದಲ್ಲಿ ನಿಂದು ಭರಿತರಾಗಿರಬಲ್ಲರಾರಯ್ಯಾ ನೀವಲ್ಲದೆ ? ನಿಮ್ಮ ಒಕ್ಕು ಮಿಕ್ಕ ಶೇಷಪ್ರಸಾದದ ಕಾರುಣ್ಯದ ಶಿಶುವಾಗಿ ಒಡಲೊಳಗೆ ಇದ್ದಲ್ಲಿ ವಿಭೂತಿ ಪಟ್ಟವ ಕಟ್ಟಿ
ಹಸ್ತಮಸ್ತಕಸಂಯೋಗವ ಮಾಡಿ ಎನ್ನನುಳುಹಿದರಾರಯ್ಯ ನೀವಲ್ಲದೆ ? ಕೂಡಲಚೆನ್ನಸಂಗಮದೇವರ ಸಾಕ್ಷಿಯಾಗಿ ನಾನು ನಿಮ್ಮ ಕರುಣದ ಕಂದನೆಂಬುದ ಮೂರುಲೋಕ ಬಲ್ಲುದು ಕಾಣಾ ಸಂಗನಬಸವಣ್ಣ.