ಧರೆಯಾಕಾಶವಿಲ್ಲದಂದು, ತ್ರೈಮಂಡಲ ನೆಲೆಗೊಳ್ಳದಂದು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಧರೆಯಾಕಾಶವಿಲ್ಲದಂದು
ತ್ರೈಮಂಡಲ ನೆಲೆಗೊಳ್ಳದಂದು
ಹೋಮ ನೇಮ ಜಪ ತಪವಿಲ್ಲದಂದು ನಿಮ್ಮನಾರು ಬಲ್ಲರು ? ಹರಿ ಬ್ರಹ್ಮಾದಿಗಳಿಗೆ ಅಗೋಚರ
ನಿರ್ಲೇಪ ನಿರಂಜನನಾಗಿ_ ವೇದಂಗಳರಿಯವು
ಶಾಸ್ತ್ರ ಸ್ಮೃತಿಗಳು ನಿಮ್ಮನರಿಯವು. ಗಗನಕಮಲಕುಸುಮ ಪರಿಮಳದಿಂದತ್ತತ್ತಲು ಗುಹೇಶ್ವರಾ ನಿಮ್ಮ ನಿಲವನಾರು ಬಲ್ಲರು ?