Pages(key to [[Help:Page Status{{!}}Page Status]])
ಧರೆಯಾಕಾಶ ತಾರಾಮಂಡಲ ಸಪ್ತಸಮುದ್ರಂಗಳಿಲ್ಲದಂದು ಒಂದು ಮಹಾವೃಕ್ಷವಿದ್ದಿತ್ತಯ್ಯಾ. ಆ ವೃಕ್ಷವ ಕಂಡು ನಾನು `ಓಂ ನಮಃ ಶಿವಾಯ' ಎನುತಿದ್ದೆನು. ಆ ವೃಕ್ಷದಿಂದ ಷಡುಸಾದಾಖ್ಯಂಗಳು ಪುಟ್ಟಿದುವು. ಆ ಷಡುಸಾದಾಖ್ಯಂಗಳ ನೆಳಲಲ್ಲಿ ಕುಳ್ಳಿರ್ದು ನಾನು ಬಸವಾ ಬಸವಾ ಬಸವಾ ಎನುತಿರ್ದೆನು ಕಾಣಾ ಗುಹೇಶ್ವರಾ.